Select Page

Advertisement

ವಿಕಲಚೇತನನ ಮೇಲೆ ಪೊಲೀಸ್ ದೌರ್ಜನ್ಯ: ವರದಿ ಕೇಳಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ವಿಕಲಚೇತನನ ಮೇಲೆ ಪೊಲೀಸ್ ದೌರ್ಜನ್ಯ: ವರದಿ ಕೇಳಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ : ಬೆಳಗಾವಿಯಲ್ಲಿ ವಿಕಲಚೇತನನ ಮೇಲೆ ಪೊಲೀಸರು ನಡೆಸಿದ ದೌರ್ಜನ್ಯ ಕುರಿತು ತನಿಖೆ ನಡೆಸಿ ವರದಿ ನೀಡುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಿಕಲ ಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆದೇಶಿಸಿದ್ದಾರೆ.

ಈ ಕುರಿತು ಪೊಲೀಸ್ ಆಯುಕ್ತರಿಗೆ ಸಚಿವರು ಪತ್ರ ಬರೆದಿದ್ದಾರೆ. ನಡು ರಸ್ತೆಯಲ್ಲಿ ರಾತ್ರಿ ವಿಕಲ ಚೇತನ ವ್ಯಕ್ತಿಗೆ ಪೊಲೀಸರು ಹಿಗ್ಗಾ ಮುಗ್ಗಾ ಥಳಿಸಿ, ಬೂಟುಗಾಲಿನಿಂದ ಒದ್ದು ರಾತ್ರಿಯಿಡೀ ಅಲ್ಲೇ ನರಳುವಂತೆ ಮಾಡಿದ ಕುರಿತು ಮಾಧ್ಯಮಗಳಲ್ಲಿ ವರದಿಯಾಗಿದೆ.

ಈ ಕುರಿತು ವಿಚಾರಣೆ ನಡೆಸಿ, ತಪ್ಪಿತಸ್ಥ ಪೊಲೀಸರ ಮೇಲೆ ತೆಗೆದುಕೊಂಡಿರುವ ಕ್ರಮಗಳ ಕುರಿತು ಮಾಹಿತಿ ನೀಡುವಂತೆ ಸಚಿವರು ಸೂಚಿಸಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!