Select Page

Advertisement

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗೆ ಧನ್ಯವಾದ ಸಲ್ಲಿಸಿದ ಅಥ್ಲೀಟ್ ಗಳು

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗೆ ಧನ್ಯವಾದ ಸಲ್ಲಿಸಿದ ಅಥ್ಲೀಟ್ ಗಳು

ಬೆಳಗಾವಿ: ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಬೆಂಗಳೂರಿಗೆ ತೆರಳಿದ್ದ ಸಂದರ್ಭದಲ್ಲಿ ವಸತಿ ವ್ಯವಸ್ಥೆ ಮಾಡಿದ್ದಕ್ಕಾಗಿ ಕ್ರೀಡಾಪಟುಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಧನ್ಯವಾದ ಸಲ್ಲಿಸಿದರು.

ಕರ್ನಾಟಕ ಅಥ್ಲೆಟಿಕ್ಸ್ ಅಸೋಸಿಯೇಷನ್ ವತಿಯಿಂದ ಬೆಂಗಳೂರಿನ ಕಂಠೀರವ ಮೈದಾನದಲ್ಲಿ ಆಯೋಜಿಸಲಾಗಿದ್ದ ಕರ್ನಾಟಕ ರಾಜ್ಯ ಚಿಕ್ಕ ಮಕ್ಕಳ ಅಥ್ಲೆಟಿಕ್ಸ್ ಕೂಟ 2025ರಲ್ಲಿ ಭಾಗವಹಿಸಲು ಬೆಳಗಾವಿಯ ಜ್ಯೋತಿ ಸ್ಪೋರ್ಟ್ಸ್ ಕ್ಲಬ್‌ನ 25ಕ್ಕೂ ಹೆಚ್ಚು ಮಕ್ಕಳು ತೆರಳಿದ್ದರು. ಈ ಸಂದರ್ಭದಲ್ಲಿ ಮಕ್ಕಳಿಗೆ ಹಾಗೂ ಪೋಷಕರಿಗೆ ಬೆಂಗಳೂರಿನಲ್ಲಿ ಉಳಿದುಕೊಳ್ಳಲು (ವಸತಿ) ಸಚಿವರು ವ್ಯವಸ್ಥೆ ಮಾಡಿಕೊಟ್ಟಿದ್ದರು.

ಈ ಹಿನ್ನೆಲೆಯಲ್ಲಿ, ಕ್ಲಬ್‌ನ ಪದಾಧಿಕಾರಿಗಳು, ಕ್ರೀಡಾಪಟುಗಳು ಹಾಗೂ ಪೋಷಕರು ಬೆಳಗಾವಿಯ ಸಚಿವರ ನಿವಾಸಕ್ಕೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದರು.

ಇದೇ ವೇಳೆ ಮಕ್ಕಳು ಸ್ಪರ್ಧೆಯಲ್ಲಿ ಜಯಗಳಿಸಿ ಪಡೆದ ಪದಕಗಳನ್ನು ತೋರಿಸಿ ಖುಷಿ ಹಂಚಿಕೊಂಡರು. ಇಂತಹ ಯುವ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವುದು ಹಾಗೂ ಅವರನ್ನು ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಳ್ಳುವಂತೆ ಪ್ರೇರೇಪಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಮಕ್ಕಳನ್ನು ಅಭಿನಂದಿಸಿದರು.

Advertisement

Leave a reply

Your email address will not be published. Required fields are marked *

error: Content is protected !!