ಬೆಳಗಾವಿ : ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಸಚಿವಸ್ಥಾನ ಕೈತಪ್ಪಿದ್ದಕ್ಕೆ ಬೆಂಬಲಿಗರ ಆಕ್ರೋಶದ ಕಟ್ಟೆ ಒಡೆದು ಹೋಗಿದ್ದು ರಾಜ್ಯಾದ್ಯಂತ ಪ್ರತಿಭಟನೆ ನಡೆಯುತ್ತಿವೆ.
ಲಕ್ಷ್ಮೀ ಹೆಬ್ಬಾಳಕರ್ ಬೆಂಬಲಿಗರಿಂದ. ಹಿರೇಬಾಗೇವಾಡಿ ಟೋಲ್ ಬಳಿಯಲ್ಲಿ ಪ್ರತಿಭಟನೆ ಮಾಡಿ ಆಕ್ರೋಶ ಹೊರ ಹಾಕಿದರು. ಈ ವೇಳೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಕಾಲ ಸಂಚಾರ ಅಸ್ತವ್ಯಸ್ಥ ಉಂಟಾಯಿತು.
ಲಕ್ಷ್ಮೀ ಹೆಬ್ಬಾಳಕರ್ ಅವರ ನೂರಾರು ಅಭಿಮಾನಿಗಳು ಏಕಾಏಕಿ ಬೆಳಗಾವಿ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿ ವಾಹನಗಳನ್ನು ತಡೆದು ಆಕ್ರೋಶ ಹೊರ ಹಾಕಿದರು.
ಲಕ್ಷ್ಮೀ ಹೆಬ್ಬಾಳಕರ್ ಗೆ ಸಚಿವ ಸ್ಥಾನ ಕೊಡಬೇಕೆಂದು ರಸ್ತೆ ನಡೆದರು. ಪ್ರತಿಭಟನಾಕಾರರ ಮನವೊಲಿಸಲು ಪೊಲೀಸರು ಪರದಾಟ ನಡೆಸಿದರು.
ಡಿಕೆಶಿ ಸಂಪುಟದಲ್ಲಿ ಸೇರಲು ಲಕ್ಷ್ಮೀ ಹೆಬ್ಬಾಳಕರ್ ಕೊನೆಯ ವರೆಗೆ ಪ್ರಯತ್ನ ಮಾಡಿದರು. ಆದರೆ ಕೊನೆಗೂ ತೀವ್ರ ನಿರಾಸೆ ಉಂಟಾಗಿದೆ. ಹಾಗಾಗಿ ಹಿರೇಬಾಗೇಬಾಡಿ ಟೋಲ್ ಬಳಿ ಹಾಗೂ ಬೆಳಗಾವಿ ನಗರದ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಬೆಂಬಲಿಗರು ಆಕ್ರೋಶ ಹೊರಹಾಕಿದರು. ಪ್ರತಿಭಟನೆ ಮುಂದುವರಿಸುವ ಎಚ್ಚರಿಕೆ ನೀಡಿದರು.
******
ಹೈಕಮಾಂಡ್ ಕೊಟ್ಟ ನೂತನ ಸಚಿವರ ಪಟ್ಟಿಯಲ್ಲಿ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ ಅವರ ಹೆಸರನ್ನು ಆಯ್ಕೆ ಮಾಡಲಾಗಿತ್ತು. ನಂತರ ನಡೆದ ಮಹತ್ವದ ಬೆಳವಣಿಗೆಯಲ್ಲಿ ಅವರಿಗೆ ಪ್ರಮಾಣವಚನ ತಗೆದುಕೊಳ್ಳದಂತೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಅವರಿಂದ ಉಳಿದ ಸ್ಥಾನಕ್ಕೆ ಮಹಿಳೆಯರನ್ನೇ ಪರಿಗಣಿಸುವ ಸಾಧ್ಯತೆ ದಟ್ಟವಾಗಿದೆ.



