VIDEO-ಸಿದ್ದು & ಡಿಕೆಶಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಕಿವಿಮಾತು ಏನು…?
ಬೆಳಗಾವಿ: ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಹುದ್ದೆ ಪೈಪೋಟಿ ವಿಚಾರಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿರುವ ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಮೊದಲು ಎಲೆಕ್ಷನ್ ಆಗಲಿ, ಶಾಸಕರು ಆರಿಸಿ ಬರಲಿ, ಆ ಮೇಲೆ ಪೈಪೋಟಿ ಮಾಡಲಿ ಎಂದು ತಿಳಿಸಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೊದಲು ಎಲೆಕ್ಷನ್ ಆಗಬೇಕು.ಶಾಸಕರು ಆರಿಸಿ ಬರಬೇಕು.ಬಳಿಕ ಪೈಪೋಟಿ ಮಾಡಲಿ ಎಂದರು. ಡಿ.ಕೆ.ಶಿವಕುಮಾರ್ ಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು.
ಯಾವ ಸಂದರ್ಭದಲ್ಲಿ, ಯಾವುದಕ್ಕೋಸ್ಕರ ಹೇಳಿದ್ದಾರೆ ನಾನು ನೋಡಲಿಲ್ಲ. ಮೊದಲು 224 ಕ್ಷೇತ್ರಗಳಲ್ಲಿ 114-115 ಜನ ಎಂಎಲ್‌ಎ ಆರಿಸಿ ಬರಲಿ.ಬಳಿಕ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ಆಗಬೇಕು. ಕಾಂಗ್ರೆಸ್ ಪಕ್ಷದಲ್ಲಿ ಒಂದು ಸಿಸ್ಟಮ್ ಇದೆ. ಹೈಕಮಾಂಡ್ ಇದೆ.ಹೈಕಮಾಂಡ್ ಯಾರ ಹೆಸರನ್ನು ಸೂಚಿಸುತ್ತಾರೋ. ಶಾಸಕಾಂಗ ಸಭೆಯಲ್ಲಿ ಎಲ್ಲರೂ ಯಾರನ್ನು ನಾಯಕರು ಅಂತಾ ಒಪ್ಪಿಕೊಳ್ಳುತ್ತಾರೆ ಅಂತವರು ಸಿಎಂ ಆಗ್ತಾರೆ ಎಂದು ತಮ್ಮದೇ ನಾಯಕರಿಗೆ ಟಾಂಗ್ ನೀಡಿದ್ದಾರೆ.