ಉತ್ತಮ ಸಂಸ್ಕೃತಿ ಹೊಂದಿರುವ ಯುವಕ ಸಂಸದನಾಗಿ ಆಯ್ಕೆಯಾಗಲಿ : ಶಾಸಕ ಮಹಾಂತೇಶ್ ಕೌಜಲಗಿ
ಬೈಲಹೊಂಗಲ: ಲಕ್ಷ್ಮೀ ಹೆಬ್ಬಾಳಕರ್ ಅವರು ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಹಿಂದೆಂದೂ ಕಾಣದಷ್ಟು ಅಭಿವೃದ್ಧಿ ಮಾಡುವ ಮೂಲಕ ಮನೆಮಗಳೆನಿಸಿದ್ದಾರೆ. ಅವರ ಪುತ್ರ ಮೃಣಾಲ್ ಕೂಡ ಉತ್ತಮ ಸಂಸ್ಕೃತಿ ಹೊಂದಿರುವ ಒಳ್ಳೆಯ ಗುಣ ಹೊಂದಿರುವ ಯುವಕನಾಗಿದ್ದು, ಲೋಕಸಭೆಗೆ ಆಯ್ಕೆಯಾದಲ್ಲಿ ಕ್ಷೇತ್ರದಲ್ಲಿ ಅಭಿವೃದ್ಧಿಯಾಗಲಿದೆ. ಎಲ್ಲರೂ ಅವರಿಗೆ ಮತ ನೀಡುವ ಮೂಲಕ ಲೋಕಸಭೆಗೆ ಕಳಿಸೋಣ ಎಂದು ಶಾಸಕ ಮಹಾಂತೇಶ್ ಕೌಜಲಗಿ ಅಭಿಪ್ರಾಯಪಟ್ಟರು.
ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ್ ಪರ ಬೈಲಹೊಂಗಲ ತಾಲೂಕಿನ ವಿವಿಧ ಹಳ್ಳಿಗಳಲ್ಲಿ ಬುಧವಾರ ಪ್ರಚಾರ ಕೈಗೊಳ್ಳಲಾಗಿದ್ದು, ಎಲ್ಲೆಡೆ ಭಾರೀ ಬೆಂಬಲ ವ್ಯಕ್ತವಾಗಿದೆ. ಬೈಲಹೊಂಗಲ ತಾಲೂಕಿನ ಬೈಲವಾಡ, ದೇವಲಾಪುರ, ಆನಿಗೋಳ ಮತ್ತಿತರ ಕಡೆಗಳಲ್ಲಿ ಮತಯಾಚಿಸಲಾಯಿತು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಶಾಸಕ ಮಹಾಂತೇಶ ಕೌಜಲಗಿ, ಅಭ್ಯರ್ಥಿ ಮೃಣಾಲ ಹೆಬ್ಬಾಳಕರ್, ಪಕ್ಷದ ಮುಖಂಡರಾದ ಈಶ್ವರ ಉಳ್ಳೆಗಡ್ಡಿ, ಬೆಳಗಾವಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕಾರ್ತಿಕ ಪಾಟೀಲ ಮೊದಲಾದವರು ಪ್ರಚಾರದಲ್ಲಿ ಭಾಗಿಯಾಗಿದ್ದರು.
ಎಲ್ಲ ಊರುಗಳಲ್ಲಿ ಸೇರಿದ್ದ ಅಪಾರ ಜನಸ್ತೋಮ, ಸಂಪೂರ್ಣವಾಗಿ ಕಾಂಗ್ರೆಸ್ ಗೆ ಬೆಂಬಲ ಸೂಚಿಸಿದರು. ಗ್ಯಾರಂಟಿ ಯೋಜನೆಗಳಿಂದ ಪ್ರತಿ ಕುಟುಂಬಕ್ಕೆ ಪ್ರಯೋಜನವಾಗಿದೆ. ಕಾಂಗ್ರೆಸ್ ಪಕ್ಷ ನುಡಿದಂತೆ ನಡೆದು ನಮಗೆಲ್ಲ ಬದುಕು ಕಟ್ಟಿಕೊಟ್ಟಿದೆ.
ಕ್ಷೇತ್ರದಲ್ಲಿ ಕೂಡ ಕಾಂಗ್ರೆಸ್ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಯೋಜನೆಗಳಾಗಿವೆ. ಸ್ಥಳೀಯ ಅಭ್ಯರ್ಥಿಯಾಗಿರುವ ಮೃಣಾಲ ಹೆಬ್ಬಾಳಕರ್ ಅವರಿಗೆ ನಾವೆಲ್ಲ ಮತ ನೀಡಿ ಹೆಚ್ಚಿನ ಬಹುಮತದಿಂದ ಆಯ್ಕೆ ಮಾಡುತ್ತೇವೆ ಎಂದು ಜನರು ಅಭಯನೀಡಿದರು.
ಲಕ್ಷ್ಮೀ ಹೆಬ್ಬಾಳಕರ್ ಮಾತನಾಡಿ, ಕಾಂಗ್ರೆಸ್ ಪಕ್ಷ ನಿಮ್ಮ ಕಷ್ಟ ಸುಖದಲ್ಲಿ ಸದಾ ಜನರ ಜೊತೆಯಲ್ಲಿರಲಿದೆ. ಸ್ಥಳೀಯ ಶಾಸಕ ಮಹಾಂತೇಶ ಕೌಜಲಗಿ ಕೂಡ ಉತ್ತಮವಾಗಿ ಕೆಲಸ ಮಾಡುತ್ತಿದ್ದು, ಒಳ್ಳೆಯ ಹೆಸರು ಗಳಿಸಿಕೊಂಡಿದ್ದಾರೆ. ಜನರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಮೃಣಾಲ ಹೆಬ್ಬಾಳಕರ್ ಯುವಕನಾಗಿದ್ದು, ಕೆಲಸ ಮಾಡುವ ಉತ್ಸಾಹ ಹೊಂದಿದ್ದಾನೆ. ಅವನಿಗೆ ಮತ ನೀಡಿ ಆಶಿರ್ವದಿಸಿ ಎಂದು ಕೋರಿದರು.
ಮೃಣಾಲ ಹೆಬ್ಬಾಳಕರ್ ಮಾತನಾಡಿ, ಲೋಕಸಭೆಗೆ ಆಯ್ಕೆಯಾದಲ್ಲಿ ಉತ್ತಮವಾಗಿ ಕೆಲಸ ಮಾಡಿ ಜಿಲ್ಲೆಗೆ ಹೆಸರು ತಂದುಕೊಡುತ್ತೇನೆ. ಕ್ಷೇತ್ರದಲ್ಲಿ ಹಿಂದೆಂದೂ ಆಗದಷ್ಟ ಕೆಲಸ ಮಾಡಿ ತೋರಿಸುತ್ತೇನೆ ಎಂದರು.