Select Page

Advertisement

ಇಂದು ಗೋಕಾಕ್ ನೆಲದಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ : ಸುಮಾರು 20 ಸಾವಿರಕ್ಕೂ ಅಧಿಕ ಜನರು ಭಾಗಿ ನಿರೀಕ್ಷೆ

ಇಂದು ಗೋಕಾಕ್ ನೆಲದಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ : ಸುಮಾರು 20 ಸಾವಿರಕ್ಕೂ ಅಧಿಕ ಜನರು ಭಾಗಿ ನಿರೀಕ್ಷೆ

ಬೆಳಗಾವಿ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ನಿಮಿತ್ತ ಗೋಕಾಕ ವಾಲ್ಮೀಕಿ ಕ್ರೀಡಾಂಗಣದಲ್ಲಿ ಮಂಗಳವಾರ ಪ್ರಜಾಧ್ವನಿ-2 ಸಮಾವೇಶ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಲಕ್ಷ್ಮೀ ಹೆಬ್ಬಾಳಕರ್ ಅವರು ಸೋಮವಾರ ಕ್ರೀಡಾಂಗಣಕ್ಕೆ ಭೇಟಿ ನೀಡಿ, ಕಾರ್ಯಕ್ರಮದ ಸಿದ್ಧತೆ ಕುರಿತು ಸ್ಥಳ ಪರಿಶೀಲನೆ ನಡೆಸಿದರು. ನಾಳೆ ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮಕ್ಕೆ ಗೋಕಾಕ್ ಅರಭಾವಿ ಕ್ಷೇತ್ರದಿಂದ ಸುಮಾರು 20 ಸಾವಿರಕ್ಕೂ ಹೆಚ್ಚು ಜನರು ಆಗಮಿಸುವ ನಿರೀಕ್ಷೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಸೇರಿದಂತೆ ಸಚಿವ ಸಂಪುಟದ ಹಲವು ಸದಸ್ಯರು,

ಜಿಲ್ಲೆಯ ಶಾಸಕರು, ಬ್ಲಾಕ್ ಘಟಕಗಳ‌ ಅಧ್ಯಕ್ಷರು, ಪದಾಧಿಕಾರಿಗಳು ಸೇರಿದಂತೆ ಹಲವು ಮುಖಂಡರು ಹಾಜರಿರುವರು ಎಂದು ಗೋಕಾಕ್ ಕ್ಷೇತ್ರದ ಕಾಂಗ್ರೆಸ್ ಮುಖಂಡ ಡಾ.ಮಹಾಂತೇಶ್ ಕಡಾಡಿ ತಿಳಿಸಿದರು.

ಈ ವೇಳೆ ಡಾ.ಮಹಾಂತೇಶ್ ಕಡಾಡಿ, ಸಿದ್ದಲಿಂಗ ದಳವಾಯಿ,  ಅಶೋಕ್ ಪೂಜಾರಿ, ಯಲ್ಲಪ್ಪ ಪೂಜಾರಿ, ಗಂಗಾಧರ ಬಡಕುಂದ್ರಿ, ಸಿಸಿ ಕೊಣ್ಣೂರ ಉಪಸ್ಥಿತರಿದ್ದರು.

Advertisement

Leave a reply

Your email address will not be published. Required fields are marked *

error: Content is protected !!