Select Page

Advertisement

Laxmi Hebbalkar – ಮಲಪ್ರಭಾ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Laxmi Hebbalkar – ಮಲಪ್ರಭಾ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಸವದತ್ತಿ : ಈ ಬಾರಿ ರಾಜ್ಯಾದ್ಯಂತ ಉತ್ತಮ ಮಳೆಯಾಗಿದ್ದು, ಜಲಾಶಯಗಳು, ಕೆರೆಕಟ್ಟೆಗಳು ತುಂಬಿದ್ದು, ರೈತರ ಮುಖದಲ್ಲಿ ಹರ್ಷದ ಹೊನಲು ಮೂಡಿದೆ. ಮಲಪ್ರಭಾ ಜಲಾಶಯದಲ್ಲಿ ರೈತರ ಅಗತ್ಯಕ್ಕೆ ತಕಷ್ಟು ನೀರು ಲಭ್ಯವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸವದತ್ತಿ ತಾಲೂಕಿನ ನವಿಲುತೀರ್ಥ ಜಲಾಶಯಕ್ಕೆ ಗಂಗಾಪೂಜೆ ಹಾಗೂ ಬಾಗಿನ ಅರ್ಪಿಸಿದ ಬಳಿಕ ಮಾತನಾಡಿದ ಸಚಿವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಕಾಲ್ಗುಣದಿಂದಾಗಿ ರಾಜ್ಯಕ್ಕೆ ಉತ್ತಮ ಮಳೆ, ಬೆಳೆಯಾಗಿದೆ ಎಂದರು.

ಮಲಪ್ರಭಾ ಜಲಾಶಯ 50 ವರ್ಷದ ಇತಿಹಾಸದಲ್ಲಿ 10ನೇ ಬಾರಿಗೆ ಭರ್ತಿಯಾಗಿದೆ. ಮಲಪ್ರಭಾ ಜಲಾಶಯ ಪೂರ್ತಿ ತುಂಬಿರುವುದರಿಂದ ರೈತರಿಗೆ ಅಗತ್ಯವಾದಾಗ ನೀರು ಬಿಡುವುದಕ್ಕೆ ಯಾವುದೇ ಸಮಸ್ಯೆಯಾಗುವುದಿಲ್ಲ ಎಂಬ ವಿಶ್ವಾಸವಿದೆ ಎಂದರು.

ಕಳೆದ ವರ್ಷ ಮಳೆಯ ಅಭಾವದಿಂದಾಗಿ ಜಲಾಶಯ ತುಂಬದೆ ಆತಂಕಕ್ಕೆ ಕಾರಣವಾಗಿತ್ತು. ಆದರೆ ಈ ವರ್ಷ ಜಲಾಶಯ ಭರ್ತಿಯಾಗಿದೆ. ಜಲಾಶಯದ ಗರಿಷ್ಟ ಮಟ್ಟ 2079.5 ಅಡಿ – 37.731 ಟಿಎಂಸಿ ಸಾಮರ್ಥ್ಯವಿದ್ದು ಪೂರ್ತಿ ನೀರು ಸಂಗ್ರಹವಾಗಿದೆ. ಇಂದು ಎಲ್ಲರ ಜೊತೆ ಸೇರಿ ಗಂಗಾ ಪೂಜೆ ನೆರವೇರಿಸಿ, ಬಾಗಿನ ಅರ್ಪಿಸಿದ್ದೇನೆ. ಜನರಿಗೆ ಒಳ್ಳೆಯದಾಗಲೆಂದು ಪ್ರಾರ್ಥಿಸಿದ್ದೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಜಲಾಶಯದಲ್ಲಿ ಒಟ್ಟು 37 ಟಿಎಂಸಿ ನೀರು ತುಂಬಿದ್ದು, ಇದರಲ್ಲಿ 16 ಟಿಎಂಸಿ ನೀರು ಕುಡಿಯುವುದಕ್ಕೆ ಹಾಗೂ 16 ಟಿಎಂಸಿ ನೀರಾವರಿಗೆ ಬೇಕಾಗುತ್ತದೆ. ರೈತರಿಗೆ ನೆರವು ನೀಡುವುದೇ ನಮ್ಮ ಉದ್ದೇಶ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಜಲಾಶಯ ಭರ್ತಿಯಾಗಿ ನಮಗೆಲ್ಲ ಖುಷಿ ತಂದಿದೆ. ಈ ಜಲಾಶಯದ ಮೊದಲ ಆದ್ಯತೆ ಕುಡಿಯುವ ನೀರು. ಹಾಗೆಯೇ, ರೈತರ ಹಿತ ಕಾಯುವುದಕ್ಕೆ ಕೂಡ ನಾವು ಬದ್ಧರಾಗಿದ್ದೇವೆ ಎಂದು ಅವರು ಹೇಳಿದರು.

ಈ ವೇಳೆ ನವಲಗುಂದ ಶಾಸಕ ಎನ್.ಎಚ್.ಕೋನರೆಡ್ಡಿ, ಬಾದಾಮಿ ಶಾಸಕ ಬಿ.ಬಿ.ಚಿಮ್ಮನಕಟ್ಟಿ, ಸವದತ್ತಿ ಶಾಸಕ ವಿಶ್ವಾಸ್ ವೈದ್ಯ, ಮಲಪ್ರಭಾ ನೀರು ಬಳಕೆದಾರರ ಮಹಾಮಂಡಳ ಅಧ್ಯಕ್ಷ ಸದಾಶಿವಗೌಡ ಪಾಟೀಲ್, ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್,

ಕರ್ನಾಟಕ ನೀರಾವರಿ ನಿಗಮದ ಮುಖ್ಯ ಇಂಜಿನಿಯರ್ ಎ.ಎಲ್.ವಾಸನದ, ಆಧೀಕ್ಷಕ ಇಂಜಿನಿಯರ್ ವಿ.ಎಸ್. ಮಧುಕರ್, ಸವದತ್ತಿ, ಯರಗಟ್ಟಿ, ಮುನವಳ್ಳಿಯ ಪುರಸಭೆ ಹಾಗೂ ಎಪಿಎಂಸಿ ಅಧ್ಯಕ್ಷರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

Advertisement

Leave a reply

Your email address will not be published. Required fields are marked *

error: Content is protected !!