ಬೆಳಗಾವಿ ಗ್ರಾಮೀಣದಲ್ಲಿ ಬ್ಯಾನರ್ ಪೊಲಿಟಿಕ್ಸ್ : ಪೂಜೆ ಮಾಡುವುದು ಬಿಟ್ಟು ಅಭಿವೃದ್ಧಿ ಕೆಲಸ ಮಾಡಲಿ
ಬೆಳಗಾವಿ : ಕೇಂದ್ರ ಸರ್ಕಾರದ ಅಭಿವೃದ್ಧಿ ಯೋಜನೆಗಳನ್ನು ತಮ್ಮ ಹೆಸರಲ್ಲಿ ಬ್ಯಾನರ್ ಅಳವಡಿಸಿಕೊಂಡು ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಚಾರ ಪಡೆಯುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಧನಂಜಯ್ ಜಾಧವ್ ಆಕ್ರೋಶ ವ್ಯಕ್ತಪಡಿಸಿದರು.
ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಇವರು. ಕೇಂದ್ರ ಸರ್ಕಾರದ ಜಲ ಜೀವನ್ ಮಿಷನ್ ಸೇರಿದಂತೆ ಹಲವಾರು ಯೋಜನೆಗಳು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಯೋಗದಲ್ಲಿ ಅನುಷ್ಠಾನಗೊಂಡಿದ್ದರು, ಬೆಳಗಾವಿ ಗ್ರಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಇದು ತಾವು ಮಾಡಿದ ಕೆಲಸ ಎಂದು ಪ್ರಚಾರ ಪಡೆಯುತ್ತಿದ್ದಾರೆ. ಜೊತೆಗೆ ಕ್ಷೇತ್ರದಲ್ಲಿ ಹಲವಾರು ಸಮಸ್ಯೆಗಳಿದ್ದರು ಎಲ್ಲೆಂದರಲ್ಲಿ ಬ್ಯಾನರ್ ಅಳವಡಿಸಿಕೊಂಡಿದ್ದರಿಂದ ಜನರಿಗೆ ತೊಂದರೆ ಉಂಟಾಗುತ್ತಿದೆ ಎಂದರು.
ಕ್ಷೇತ್ರದ ಸಮಸ್ಯೆ ಕುರಿತಾಗಿ ಶಾಸಕಿ ಹೆಬ್ಬಾಳ್ಕರ್ ಗಮನಹರಿಸಲಿ. ಕೇವಲ ಪೂಜೆ ಮಾಡುವ ಕೆಲಸ ಮಾಡದೆ ಕ್ಷೇತ್ರದ ಅಭಿವೃದ್ಧಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಶ್ರಮಿಸಲಿ ಎಂದರು.