BIG NEWS : ಅವಧಿ ಮುಗಿದ ಗ್ರಾಮಪಂಚಾಯತಿಗಳಿಗೆ ಆಡಳಿತಾಧಿಕಾರಿ ನೇಮಕಕ್ಕೆ ಆದೇಶ

ಬೆಂಗಳೂರು : ರಾಜ್ಯದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ (local body elections ) ಅವಧಿ ಮುಗಿದರೂ ಸಹ ಇನ್ನೂ ಕೂಡ ಸರ್ಕಾರ ಚುನಾವಣೆ ನಡೆಸೋ ನಿರ್ಧಾರ ಕೈಗೊಂಡಿಲ್ಲ. ಈ ಬೆನ್ನಲ್ಲೇ ಗ್ರಾಮಪಂಚಾಯ್ತಿ (Grama panchayat ) ಕುರಿತು ಹೊಸ ಅಪ್ಡೇಟ್ ದೊರೆತಿದೆ.
ರಾಜ್ಯದಲ್ಲಿ ಅವಧಿ ಮುಗಿದ ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲು ಸರ್ಕಾರ ಆದೇಶ ಹೊರಡಿಸಿದೆ.
2026-2031ರ ಅವಧಿಗಾಗಿ ಈ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆದು ಗ್ರಾಮ ಪಂಚಾಯಿತಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ನಡೆಯುವ ದಿನಾಂಕದವರೆಗೆ ಈ ಗ್ರಾಮ ಪಂಚಾಯಿತಿಗಳಿಗೆ ಜಿಲ್ಲಾಧಿಕಾರಿಗಳು ಆಡಳಿತಾಧಿಕಾರಿಗಳನ್ನು ನೇಮಿಸಲು ಅವಕಾಶವಿರುತ್ತದೆ. ಕೆಲ ದಿನಗಳಲ್ಲಿ ಅಧಿಕಾರಿಗಳು ನೇಮಕವಾಗಲಿದ್ದಾರೆ.
ಇದರನ್ವಯ ಜಿಲ್ಲಾಧಿಕಾರಿಗಳು ಸಂಬಂಧ ಪಟ್ಟ ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳ ರಚನೆಯಾಗಿರುವ ಹಾಗೂ ಮುಕ್ತಾಯಗೊಂಡಿರುವ ದಿನಾಂಕಗಳನ್ನು ಪಡೆ ಪರಿಶೀಲಿಸಿ ಗ್ರಾಮ ಪಂಚಾಯಿತಿಗಳು ಮುಕ್ತಾಯಗೊಳ್ಳಲಿರುವ ದಿನಾಂಕದ ಮುಂದಿನ ದಿನಾಂಕದಿಂದ ಜಾರಿಗೆ ಬರುವಂತೆ ಆಡಳಿತಾಧಿಕಾರಿಗಳು ನೇಮಿಸಿ ಅಧಿಸೂಚಿಸುವಂತೆ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯೆ ಪೀಠಾಧಿಕಾರಿ ಶಿವಕುಮಾರ್ ಸೂಚಿಸಿದ್ದಾರೆ.

