
ಲೋಕಾಯುಕ್ತ ದಾಳಿಯಲ್ಲಿ ಹೊರಬಿತ್ತು ಕೋಟಿ ಲೆಕ್ಕದ ಆಸ್ತಿ

ಬೆಳಗಾವಿ : ಭ್ರಷ್ಟ ಅಧಿಕಾರಿಗಳ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ಬೆಳಿಗ್ಗೆ ಬೆಳಗಾವಿಯ ಇಬ್ಬರು ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದು, ಮಹತ್ವದ ದಾಖಲೆ ವಶಪಡಿಸಿಕೊಂಡಿದ್ದಾರೆ.
ಬೆಳಗಾವಿಯ ಅನಗೋಳದ ಸಬ್ ರಿಜಿಸ್ಟ್ರಾರ್ ಸಚಿನ್ ಮಂಡೇದ ಮನೆ ಮೇಲೆ ಲೋಕಾಯುಕ್ತ ಎಸ್ಪಿ ಹನುಮಂತರಾಯ ನೇತೃತ್ವದಲ್ಲಿ ದಾಳಿ ನಡೆಸಿದರು.
ಸಬ್ ರಿಜಿಸ್ಟ್ರಾರ್ ಸಚಿನ್ ಮಂಡೇದ ಅವರ ಐದು ಕಡೆಗಳಲ್ಲಿ ಲೋಕಾಯುಕ್ತ ದಾಳಿ ನಡೆದ ಸಂದರ್ಭದಲ್ಲಿ ಒಂದು ಸೈಟ್, ಮನೆ ಸೇರಿದಂತೆ 58 ಲಕ್ಷ ಮೌಲ್ಯದ ಸ್ಥಿರಾಸ್ತಿ, 87 ಲಕ್ಷ ಮೌಲ್ಯದ ಬಂಗಾರದ ಆಭರಣ ಸೇರಿ 2 ಕೋಟಿ, 50 ಲಕ್ಷ ಮೌಲ್ಯದ ಆಸ್ತಿ ಪತ್ತೆಯಾಗಿದೆ.