ಹೈಕಮಾಂಡ್ ಅವಕಾಶ ಕೊಟ್ಟರೆ ಡಿಸಿಎಂ ಆಗುವೆ – ಎಂ.ಬಿ ಪಾಟೀಲ್
ಬೆಂಗಳೂರು : ಡಿಸಿಎಂ ಸೃಷ್ಟಿ ಮಾಡುವುದು ಹೈಕಮಾಂಡ್ ಗೆ ಬಿಟ್ಟ ವಿಚಾರ. ಚುನಾವಣೆ ಹಿತದೃಷ್ಟಿಯಿಂದ ಹೈಕಮಾಂಡ್ ಹುದ್ದೆ ಸೃಷ್ಟಿಸಿ ನನಗೂ ಅವಕಾಶ ಕಲ್ಪಿಸಿದರೆ ಖಂಡಿತ ಆಗುವೆ ಎಂದು ಪರೋಕ್ಷವಾಗಿ ಉಪ ಮುಖ್ಯಮಂತ್ರಿ ಹುದ್ದೆ ಕುರಿತು ಸಚಿವ ಎಂ.ಬಿ ಪಾಟೀಲ್ ಹೇಳಿಕೆ ನೀಡಿದರು.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಇವರು. ಡಿಸಿಎಂ ಹುದ್ದೆ ಹೈಕಮಾಂಡ್ ಮಟ್ಟದಲ್ಲಿ ಸೃಷ್ಟಿ ಆಗಬೇಕು. 135 ಸ್ಥಾನ ಪಡೆದು ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಮುಂಬರುವ ಲೋಕಸಭಾ ಚುನಾವಣೆ ಅತ್ಯಂತ ಮಹತ್ವದ್ದಾಗಿದೆ. ಈ ಕುರಿತು ಹೈಕಮಾಂಡ್ ನಿರ್ಧಾರ ಮಾಡಲಿದೆ ಎಂದರು.
ಡಿಸಿಎಂ ಹುದ್ದೆ ಸೃಷ್ಟಿ ಕುರಿತು ಬೇಕು, ಬೇಡಗಳ ಕುರಿತು ಪಕ್ಷದ ಸಭೆಯಲ್ಲಿ ಅಭಿಪ್ರಾಯ ಮಂಡಿಸುವೆ. ಚುನಾವಣೆ ಸಂದರ್ಭದಲ್ಲಿ ಎಲ್ಲಾ ಸಮುದಾಯದ ಬಬಲದಿಂದ ಅಭೂತಪೂರ್ವ ಬೆಂಬಲ ಸಿಕ್ಕಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ 15 ರಿಂದ 20 ಸ್ಥಾನ ಗೆಲ್ಲುವ ವಿಶ್ವಾಸ ಹೊರಹಾಕಿದರು.
ನಮ್ಮಲ್ಲಿ ಆಂತರಿಕ ಪ್ರಜಾಪ್ರಭುತ್ವ ವ್ಯವಸ್ಥೆ ಇದೆ. ಎಲ್ಲರಿಗೂ ಅವರ ಅಭಿಪ್ರಾಯ ಹೇಳುವ ಹಕ್ಕು ಇದ್ದು ಇದರಂತೆ ಸಚಿವ ರಾಜಣ್ಣ ಹೇಳಿಕೆ ನೀಡಿದ್ದಾರೆ. ನಮ್ಮ ಪಕ್ಷದಲ್ಲಿ ಅನೇಕರಿಗೆ ಮಂತ್ರಿ ಆಗುವ ಅರ್ಹತೆ ಇದ್ದು, ಈ ಕುರಿತು ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದರು.

