ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ನಿಶ್ಚಿತ – ಮಹಾಂತೇಶ ವಕ್ಕುಂದ
ಗೋಕಾಕ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ
ಕೇಂದ್ರದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರುವುದು
ನಿಶ್ಚಿತ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಸಾಧನೆಗಳನ್ನು ಜನರ ಬಳಿ ತಲುಪಿಸಲು ಸಾಮಾಜಿಕ ಜಾಲತಾಣವನ್ನು ಇನ್ನಷ್ಟು ಬಲಪಡಿಸುವಂತೆ ಸಾಮಾಜಿಕ ಜಾಲತಾಣದ ಸಂಚಾಲಕ ಮಹಾಂತೇಶ ವಕ್ಕುಂದ ಹೇಳಿದರು.
ಇಲ್ಲಿಯ ಎನ್‌ಎಸ್‌ಎಫ್ ಅತಿಥಿ ಗೃಹದಲ್ಲಿ ಗುರುವಾರದಂದು ಅರಭಾವಿ ಮಂಡಲ ಮಟ್ಟದ ಶಂಖನಾದ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಾರ್ಯಕರ್ತರ ಶ್ರಮದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಂದು ಅವಧಿಗೆ ಪ್ರಧಾನಿಯಾಗಲಿದ್ದಾರೆ ಎಂದು ತಿಳಿಸಿದರು. ಅಧ್ಯಕ್ಷತೆಯನ್ನು ಅರಭಾವಿ ಮಂಡಲ ಬಿಜೆಪಿ ಅಧ್ಯಕ್ಷ ಮಹಾದೇವ ಶೆಕ್ಕಿ ವಹಿಸಿದ್ದರು.
ವೇದಿಕೆಯಲ್ಲಿ ಶಾಸಕರ ಆಪ್ತ ಸಹಾಯಕ ನಾಗಪ್ಪ
ಶೇಖರಗೋಳ, ಸಾಮಾಜಿಕ ಜಾಲತಾಣದ ಜಿಲ್ಲಾ ಸಂಚಾಲಕ ನಿತೀನ ಚೌಗಲೆ, ಎಸ್‌ಸಿ ಮೋರ್ಚಾ ಜಿಲ್ಲಾ ಅಧ್ಯಕ್ಷ ಯಲ್ಲೇಶ ಕೋಲಕಾರ, ಸಹ ಸಂಚಾಲಕಿ ಜ್ಯೋತಿ ಕೋಲ್ಹಾರ, ಬಸವರಾಜ ಇಟ್ನಾಳ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪರಸಪ್ಪ ಬಬಲಿ, ಮಹಾಂತೇಶ ಕುಡಚಿ, ಮಂಡಲ ಯುವ ಮೋರ್ಚಾ ಅಧ್ಯಕ್ಷ ಪ್ರಮೋದ ನುಗ್ಗಾನಟ್ಟಿ, ಎಸ್‌ಸಿ ಮೋರ್ಚಾ ಅಧ್ಯಕ್ಷ ನಾಗಪ್ಪ ಕುದರಿ, ಎಸ್‌ಟಿ ಮೋರ್ಚಾ ಅಧ್ಯಕ್ಷ ಯಲ್ಲಾಲಿಂಗ ವಾಳದ, ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಇಕ್ಬಾಲ್ ಸರ್ಕಾವಸ್, ಸೇರಿದಂತೆ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.