Select Page

Advertisement

ಮರಾಠಾ ಮೀಸಲಾತಿ ಅಂಗೀಕರಿಸಿದ ಮಹಾರಾಷ್ಟ್ರ ಸರ್ಕಾರ‌

ಮರಾಠಾ ಮೀಸಲಾತಿ ಅಂಗೀಕರಿಸಿದ ಮಹಾರಾಷ್ಟ್ರ ಸರ್ಕಾರ‌

ಮುಂಬೈ‌ :  ಮರಾಠಾ ಸಮುದಾಯಕ್ಕೆ ಮೀಸಲಾತಿ ನೀಡುವ ವಿಚಾರಕ್ಕೆ ಸಂಬಂಧಪಟ್ಟಂತೆ ಮಹಾರಾಷ್ಟ್ರ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಅದರಂತೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ. 10ರಷ್ಟು ಮೀಸಲಾತಿ ನೀಡುವ ಪ್ರಸ್ತಾವನೆಗೆ ಅನುಮೋದನೆ ನೀಡಿದೆ (Maratha Reservation).

ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ 2018ರಲ್ಲಿ ಅಂದಿನ ರಾಜ್ಯ ಸರ್ಕಾರ ನೀಡಿದಂತೆಯೇ ಶಿಕ್ಷಣ ಮತ್ತು ಉದ್ಯೋಗಗಳಲ್ಲಿ ಮರಾಠರಿಗೆ ಶೇಕಡಾ 10ರಷ್ಟು ಮೀಸಲಾತಿ ವಿಸ್ತರಿಸುವ ಮಸೂದೆಯನ್ನು ಮಂಡಿಸಿದರು.

ಸುನಿಲ್ ಶುಕ್ರೆ ನೇತೃತ್ವದ ಮಹಾರಾಷ್ಟ್ರ ಹಿಂದುಳಿದ ವರ್ಗಗಳ ಆಯೋಗ (ಎಂಬಿಸಿಸಿ) ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ ವರದಿಯ ಆಧಾರದ ಮೇಲೆ ಮೀಸಲಾತಿಯನ್ನು ವಿಸ್ತರಿಸಲಾಗಿದೆ.

Advertisement

Leave a reply

Your email address will not be published. Required fields are marked *

error: Content is protected !!