ಡಿಸಿಸಿ ಚುನಾವಣಾ ಅಖಾಡಕ್ಕೆ ಕುಮಠಳ್ಳಿ ಎಂಟ್ರಿ ; ಸವದಿ ವಿರುದ್ಧ ಸ್ಪರ್ಧೆ..!
ಬೆಳಗಾವಿ : ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕರ ಆಯ್ಕೆ ಚುನಾವಣಾ ಅಖಾಡ ಸಿದ್ದಗೊಂಡಿದ್ದು ನಾಮಪತ್ರ ಸಲ್ಲಿಕೆ ಪ್ರಾರಂಭವಾಗಿದೆ.
ಡಿಸಿಸಿ ನಿರ್ದೇಶಕರ ಹುದ್ದೆಗೆ ಅಥಣಿ ಮಾಜಿ ಶಾಸಕ ಮಹೇಶ್ ಕುಮಠಳ್ಳಿ ಅಖಾಡಕ್ಕೆ ಇಳಿದಿದ್ದಾರೆ. ಇಂದು ನಾಮಪತ್ರ ಸಲ್ಲಿಸಿದ್ದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ವಿರುದ್ಧ ಸ್ಪರ್ಧೆಗಿಳಿದಿದ್ದಾರೆ.
ಮಾಜಿ ಡಿಸಿಎಂ ಲಕ್ಷ್ಮಣ ಸವದಿ ವಿರುದ್ಧ ಸೂಕ್ತ ಅಭ್ಯರ್ಥಿ ಕಣಕ್ಕೆ ಇಳಿಸುವುದಾಗಿ ಮಾಜಿ ಸಚಿವ ರಮೇಶ್ ಜಸರಕಿಹೊಳಿ ಹೇಳಿಕೆ ನೀಡಿದ್ದರು. ಸಧ್ಯ ಅವರ ಆಪ್ತ ಮಹೇಶ್ ಕುಮಠಳ್ಳಿ ಅವರನ್ನು ಕಣಕ್ಕೆ ಇಳಿಸಿದ್ದಾರೆ.


