ಬೆಳಗಾವಿ : ನಾಡು, ನುಡಿ, ಸಂಗೀತ, ಶೈಕ್ಷಣಿಕ ಸೇವೆ ಸೇರಿದಂತೆ ಸಮಾಜ ಸೇವೆಯಲ್ಲಿ ತೊಡಗಿಕೊಂಡಿರುವ ಶಿಕ್ಷಕ ಮಲ್ಲೇಶ ಹೊನಕಡಬಿ ಅವರಿಗೆ ಕನ್ನಡ ಫಿಲಂ ಚೇಂಬರ್ ವತಿಯಿಂದ ವೀರ ಕನ್ನಡಿಗ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಕಳೆದ ಆಗಸ್ಟ್ 15 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಇವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಈ ವೇಳೆ ಸಂಸ್ಥೆಯ ಅಧ್ಯಕ್ಷರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಮಲ್ಲೇಶ ಹೊನಕಡಬಿ ಅವರಿಗೆ ವೀರ ಕನ್ನಡಿಗ ಪ್ರಶಸ್ತಿ



