Breaking : ಮಲ್ಲಿಕಾರ್ಜುನ ಖರ್ಗೆ ಆರೋಗ್ಯದಲ್ಲಿ ಏರುಪೇರು ; ಆಸ್ಪತ್ರೆಗೆ ದಾಖಲು
ಜಮ್ಮು ಕಾಶ್ಮೀರ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಗ್ಯದಲ್ಲಿ ಏರುಪೇರು ಉಂಟಾದ ಹಿನ್ನಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಜಮ್ಮು ಕಾಶ್ಮೀರದ ಕಥುವಾದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಭಾಷಣ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ತುಂಬಾ ಆಯಾಸವಾದಂತೆ ಕಂಡುಬಂದ ಖರ್ಗೆ ಅವರನ್ನು ಪಕ್ಕದಲ್ಲಿದ್ದ ಕಾಂಗ್ರೆಸ್ ನಾಯಕರು ಕೈ ಹಿಡಿದು ಕೂರಿಸಿದರು. ಈ ಸಂದರ್ಭದಲ್ಲಿ ತುಂಬಾ ಆಯಾಸದಲ್ಲೇ ಮಲ್ಲಿಕಾರ್ಜುನ ಖರ್ಗೆ ಕಂಡುಬಂದರು.
ನಂತರ ಇವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಆಸಿಡಿಟಿ ಸಮಸ್ಯೆಯಿಂದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಈ ರೀತಿ ಆಗಿದೆ ಎಂದು ತಿಳಿದುಬಂದಿದ್ದು, ಸಧ್ಯ ಆರೋಗ್ಯ ಸ್ಥಿರವಾಗಿದ್ದು ಯಾವುದೇ ತೊಂದರೆ ಇಲ್ಲ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.


