
ಗಂಗಾ ಸ್ನಾನದಿಂದ ಹೊಟ್ಟೆ ತುಂಬುತ್ತಾ? ; ಮಲ್ಲಿಕಾರ್ಜುನ ಖರ್ಗೆ

ಮಧ್ಯಪ್ರದೇಶ : ಗಂಗಾ ಸ್ನಾನದಿಂದ ಬಡತನ ನಿರ್ಮೂಲನೆ ಆಗುತ್ತದೆಯಾ?. ಅದು ನಿಮ್ಮ ಹೊಟ್ಟೆ ತುಂಬಿಸುತ್ತಾ. ಬಿಜೆಪಿ ನಾಯಕರು ಕ್ಯಾಮರಾಗಳಲ್ಲಿ ಕಾಣಲು ಪೈಪೋಟಿ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ನೀಡಿದ್ದಾರೆ.
ಮಧ್ಯಪ್ರದೇಶದ ಮಹು ನಲ್ಲಿ ನಡೆದ ಜೈ ಬಾಪು ಜೈ ಭೀಮ್ ಜೈ ಸಂವಿಧಾನ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಇವರು. ಧರ್ಮದ ಹೆಸರಿನಲ್ಲಿ ಬಡವರು ಶೋಷಣೆಗೆ ಒಳಗಾಗುತ್ತಿದ್ದಾರೆ. ಗಂಗಾ ನದಿಯಲ್ಲಿ ಸ್ನಾನ ಮಾಡಿದರೆ ಬಡತನ ನಿರ್ಮೂಲನೆ ಆಗುವುದಿಲ್ಲ. ನಾನು ಯಾರ ನಂಬಿಕೆಯನ್ನು ಪ್ರಶ್ನಿಸಲು ಬಯಸುವುದಿಲ್ಲ ಎಂದರು.
ನರೇಂದ್ರ ಮೋದಿ ಅವರ ಸುಳ್ಳು ಭರವಸೆಗಳ ಬಲೆಗೆ ಬೀಳಬೇಡಿ. ಗಂಗಾ ಸ್ನಾನದಿಂದ ಬಡತನ ಕೊನೆಯಾಗುತ್ತದೆಯೇ? ಅದು ನಿಮ್ಮ ಹೊಟ್ಟೆಯನ್ನು ತುಂಬಿಸುತ್ತದೆಯೇ? ಎಂದು ಪ್ರಶ್ನಿಸಿದ ಖರ್ಗೆ, ನಾನು ಯಾರ ನಂಬಿಕೆಯನ್ನು ಪ್ರಶ್ನಿಸಲು ಬಯಸುವುದಿಲ್ಲ. ಯಾರಿಗಾದರೂ ನನ್ನ ಹೇಳಿಕೆಯಿಂದ ನೋವಾದರೆ ಕ್ಷಮೆಯಾಚಿಸುತ್ತೇನೆ.
“ಆದರೆ ಹೇಳಿ, ಒಂದು ಮಗು ಶಾಲೆಗೆ ಹೋಗದೆ, ಹಸಿವಿನಿಂದ ಸಾಯುತ್ತಿರುವಾಗ, ಕೂಲಿ ಕಾರ್ಮಿಕರಿಗೆ ಬಾಕಿ ಸಿಗದ ಸಮಯದಲ್ಲಿ ಬಿಜೆಪಿಯವರು ಸಾವಿರಾರು ರೂ. ಖರ್ಚು ಮಾಡಿ ಗಂಗಾದಲ್ಲಿ ಸ್ನಾನ ಮಾಡಲು ಪೈಪೋಟಿ ನಡೆಸುತ್ತಿದ್ದಾರೆ. ಕ್ಯಾಮರಾದಲ್ಲಿ ಚೆನ್ನಾಗಿ ಕಾಣಿಸುವವರೆಗೂ ಅವರು ಸ್ನಾನ ಮಾಡುತ್ತಲೇ ಇರುತ್ತಾರೆ ಎಂದು ಲೇವಡಿ ಮಾಡಿದರು.