ಮಲ್ಲಿಕಾರ್ಜುನ ಖರ್ಗೆ ಪುತ್ರ ಅಸ್ವಸ್ಥ ; ಆಸ್ಪತ್ರೆಯಲ್ಲಿ ಮುಂದುವರಿದ ಚಿಕಿತ್ಸೆ
ಬೆಂಗಳೂರು : ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕಿರಿಯ ಪುತ್ರ ಮಿಲಿಂದ್ ಖರ್ಗೆ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದು ಪರಿಸ್ಥಿತಿ ಗಂಭೀರವಾದ ಹಿನ್ನಲೆಯಲ್ಲಿ ಚಿಕಿತ್ಸೆ ಮುಂದುವರಿದೆ.
ವೈದ್ಯಕೀಯ ಮೂಲಗಳ ಪ್ರಕಾರ ಮಿಲಿಂದ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಲಾಗುತ್ತಿದ್ದೆ.
ಮಲ್ಲಿಕಾರ್ಜುನ ಖರ್ಗೆ ಅವರ ಕಿರಿಯ ಪುತ್ರರಾದ ಮಿಲಿಂದ್ ಅವರು ಎಂಬಿಎ ಪರವೀಧರರು. ಖಾಸಗಿ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಇವರು ರಾಜಕೀಯದಿಂದ ಸಾಕಷ್ಟು ದೂರ ಉಳಿದಿದ್ದಾರೆ.


