ಖರ್ಗೆಗೆ ಕೊರೊನಾ ಸೋಂಕು ದೃಢ : ಬೆಳಗಾವಿಯಲ್ಲಿ ಹೆಚ್ಚಿದ ಆತಂಕ
ಬೆಳಗಾವಿ : ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಇತ್ತ ಬೆಳಗಾವಿಯಲ್ಲಿಯೂ ಆತಂಕ ಮನೆಮಾಡಿದೆ. ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಜಿಲ್ಲೆಯ ಸಾವಿರಾರು ಕಾರ್ಯಕರ್ತರು ಪಾದಯಾತ್ರೆಯಲ್ಲಿ ಪಾಲ್ಗೊಂಡ ಹಿನ್ನಲೆಯಲ್ಲಿ ಈ ಸಮಸ್ಯೆ ಉದ್ಭವವಾಗಿದೆ.
ಈ ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪುತ್ರ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿ ಮಾಹಿತಿ ನೀಡಿದ್ದು. ಕೋವಿಡ್ ಸೋಂಕು ತಗುಲಿದ್ದನ್ನು ದೃಢಪಡಿಸಿದ್ದಾರೆ. ಜತೆಗೆ ಮೂವರು ಸಿಬ್ಬಂದಿಗಳಿಗೂ ಸೋಂಕು ತಗುಲಿದೆ. ಮೇಕೆದಾಟು ಉದ್ಘಾಟನೆ ಕಾರ್ಯಕ್ರಮ ಸೇರಿದಂತೆ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ್ದ ಖರ್ಗೆ ಜೊತೆ ಅನೇಕ ಕಾಂಗ್ರೆಸ್ ನಾಯಕರು ಸಂಪರ್ಕದಲ್ಲಿದ್ದರು. ಇತ್ತ ಬೆಳಗಾವಿ ನಾಯಕರು ಇರುವುದು ಆತಂಕಕ್ಕೆ ಕಾರಣವಾಗಿದೆ.
ಹೌದು ಮೇಕೆದಾಟು ಪಾದಯಾತ್ರೆಯಲ್ಲಿ ಬೆಳಗಾವಿಯ ಕಾಂಗ್ರೆಸ್ ನಾಯಕರು ಸೇರಿದಂತೆ ಸಾವಿರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು. ಸಧ್ಯ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇತ್ತ ಪಾದಯಾತ್ರೆಯಲ್ಲಿ ಪಾಲ್ಗೊಂಡು ವಾಪಸ್ ಸ್ವ ಕ್ಷೇತ್ರಕ್ಕೆ ತೆರಳುವವರಿಂದ ಮತ್ತೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುವ ಆತಂಕ ಮನೆಮಾಡಿದೆ.
ಗಡಿ ಜಿಲ್ಲೆಯಾದ ಬೆಳಗಾವಿ ಈವರೆಗೆ ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳಿಂದ ಬರುವವ ಪ್ರಯಾಣಿಕರಿಂದ ಕೋವಿಡ್ ಸಂಕಷ್ಟಕ್ಕೆ ಒಳಗಾಗುತ್ತಿತ್ತು. ಆದರೆ ಈ ಬಾರಿ ಮೇಕೆದಾಟು ಪಾದಯಾತ್ರೆ ಸಂಕಷ್ಟ ಎದುರಾಗಿದ್ದು, ಜಿಲ್ಲೆಯ ಕಾಂಗ್ರೆಸ್ ಪಕ್ಷದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಅಂಜಲಿ ನಿಂಬಾಳ್ಕರ್ ಸೇರಿದಂತೆ ಸಾವಿರಾರು ಸಂಖ್ಯೆಯ ಕಾರ್ಯಕರ್ತರು ಈ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ಒಟ್ಟಿನಲ್ಲಿ ಪ್ರತಿಬಾರಿ ತನ್ನದಲ್ಲದ ತಪ್ಪಿಗೆ ಸಂಕಷ್ಟಕ್ಕೆ ಒಳಗಾಗುವ ಕುಂದಾನಗರಿ ಈ ಬಾರಿ ಮೇಕೆದಾಟು ಸಂಕಷ್ಟ ತನ್ನ ಮೈಮೇಲೆ ಎಳೆದುಕೊಂಡಿದ್ದು ಸುಳ್ಳಲ್ಲ.