ಉಪ ಸಭಾಧ್ಯಕ್ಷ ಆನಂದ ಮಾಮನಿ ಆರೋಗ್ಯ ವಿಚಾರಿಸಿದ ರಾಜಾಹುಲಿ
ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿರುವ ಸವದತ್ತಿ ಶಾಸಕ ಹಾಗೂ ವಿಧಾನಸಭೆ ಉಪ ಸಭಾಧ್ಯಕ್ಷ ಆನಂದ ಮಾಮನಿ ಅವರನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
ಚೆನೈ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದು, ಇಂದು ರಾಜಾಹುಲಿ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.