ಉಪ ಸಭಾಧ್ಯಕ್ಷ ಆನಂದ ಮಾಮನಿ ಆರೋಗ್ಯದಲ್ಲಿ ಏರುಪೇರು
ಸವದತ್ತಿ : ಸವದತ್ತಿ ಯಲ್ಲಮ್ಮ ಮತಕ್ಷೇತ್ರದ ಶಾಸಕ ಹಾಗೂ ಉಪ ಸಭಾಧ್ಯಕ್ಷ ಆನಂದ ಮಾಮನಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಚನೈ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ಶಾಸಕ ಆನಂದ ಮಾಮನಿ ಅವರನ್ನು ಚನೈ ನ ಪ್ರತಿಷ್ಠಿತ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈಗಾಗಲೇ ವಿಧಾನ ಮಂಡಲ ಅಧಿವೇಶನ ಪ್ರಾರಂಭವಾಗಿದ್ದು ಉಪ ಸಭಾಪತಿಯಾಗಿರುವ ಇವರು ಗೈರಾಗಿದ್ದಾರೆ.
ಒಟ್ಟಿನಲ್ಲಿ ಬೆಳಗಾವಿ ಪ್ರಮುಖ ನಾಯಕರ ಮೇಲೆ ಒಂದಿಲ್ಲೊಂದು ಹೊಡೆತ ಬೀಳುತ್ತಿದ್ದು, ಆನಂದ ಮಾಮನಿ ಅವರ ಆರೋಗ್ಯ ಸುಧಾರಿಸಲೆಂಬುದು ಜನರ ಪ್ರಾರ್ಥನೆಯಾಗಿದೆ.