ಗಣೇಶ ವಿಸರ್ಜನೆ ಮೆರವಣಿಗೆ ಮೇಲೆ ಕಲ್ಲು, ಪೆಟ್ರೋಲ್ ಬಾಂಬ್ ಎಸೆದು ವಿಕೃತಿ ಮೆರೆದ ಮುಸ್ಲಿಂ ಯುವಕರು
ಮಂಡ್ಯ : ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ಮೇಲೆ ಪೆಟ್ರೋಲ್ ಬಾಂಬ್, ಕಲ್ಲು ತೂರಿ ಮುಸ್ಲಿಂ ಸಮುದಾಯದ ಯುವಕರು ವಿಕೃತಿ ಮೆರೆದಿದ್ದು, ಹಿಂದೂ ಸಮುದಾಯ ಈ ಘಟನೆಗೆ ಆಕ್ರೋಶ ವ್ಯಕ್ತಪಡಿಸಿದೆ.
ಮಂಡ್ಯ ಜಿಲ್ಲೆಯ ನಾಗಮಂಗಲದ ಬದರಿಕೊಪ್ಪಲ್ಲಿನಲ್ಲಿ ಘಟನೆ ನಡೆದಿದೆ. ಮೆರವಣಿಗೆ ಮೈಸೂರು ರಸ್ತೆಯ ದರ್ಗಾಬಳಿ ಬಂದಾದ ಏಕಾಏಕಿ ಪೆಟ್ರೋಲ್ ಬಾಂಬ್ ಎಸೆಯಲಾಗಿದೆ. ಈ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಏರ್ಪಟ್ಟ ಪರಿಣಾಮ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.
ಮುಸ್ಲಿಂ ಕಿಡಿಗೇಡಿಗಳು ಕಲ್ಲು ಹಾಗೂ ಪೆಟ್ರೋಲ್ ಬಾಂಬ್ ದಾಳಿ ನಂತರ ಕೈಯಲ್ಲಿ ಲಾಂಗು ಹಿಡಿದು ಭಯದ ವಾತಾವರಣ ಸೃಷ್ಟಿಸಿದ್ದಾರೆ. ಜೊತೆಗೆ ಹಲವಾರು ಬೈಕ್ ಗಳನ್ನು ಸುಡಲಾಗಿದೆ ಎಂದು ವರದಿಯಾಗಿದೆ.
ಸಧ್ಯ ನಾಗಮಂಗಲ ಪಟ್ಟಣದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ಶಾಂತಿ ಸುವ್ಯವಸ್ಥೆ ಕಲ್ಪಿಸುವಂತೆ ಸಾರ್ವಜನಿಕರಲ್ಲಿ ಜಿಲ್ಲಾಡಳಿತ ಮನವಿ ಮಾಡಿದೆ.


