ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಮಹಿಳೆ ; ತಾಯಿ, ಮಕ್ಕಳು ಆರೋಗ್ಯ
ಮಂಗಳೂರು : ಗರ್ಭಿಣಿ ಮಹಿಳೆ ನಾಲ್ವರು ಮಕ್ಕಳಿಗೆ ಜನ್ಮ ನೀಡಿದ ಅಪರೂಪದ ಘಟನೆ ಮಂಗಳೂರಿನಲ್ಲಿ ನಡೆದಿದ್ದು ತಾಯಿ, ಮಕ್ಕಳು ಆರೋಗ್ಯದಿಂದ ಇದ್ದಾರೆ.
ತೆಲಂಗಾಣ ಮೂಲದ, ಸದ್ಯ ಮಂಗಳೂರಿನಲ್ಲಿ ನೆಲೆಸಿರುವ ಮಹಿಳೆ, ಮಂಗಳೂರು ನಗರದ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದಾರೆ.
ಮಂಗಳೂರಿನಲ್ಲಿ ಪತಿ ತೇಜ ಜತೆ ನೆಲೆಸಿರುವ ಬನೊತ್ ದುರ್ಗಾರವರ ನವಜಾತ ಶಿಶುಗಳಲ್ಲಿ ಎರಡು ಹೆಣ್ಣು ಮತ್ತು ಎರಡು ಗಂಡು ಆಗಿದ್ದು, ಮಕ್ಕಳ ತೂಕ 1.2 ಕೆಜಿ, 1.1 ಕೆಜಿ ಇವೆ.