Select Page

Advertisement

ಮಂಜುನಾಥ ಪಮ್ಮಾರಗೆ ಬಿಜೆಪಿಯಲ್ಲಿ ಮಹತ್ವದ ಜವಾಬ್ದಾರಿ ; ಜಿಲ್ಲಾ ಕಾರ್ಯದರ್ಶಿಯಾಗಿ ನೇಮಕ..!

ಮಂಜುನಾಥ ಪಮ್ಮಾರಗೆ ಬಿಜೆಪಿಯಲ್ಲಿ ಮಹತ್ವದ ಜವಾಬ್ದಾರಿ ; ಜಿಲ್ಲಾ ಕಾರ್ಯದರ್ಶಿಯಾಗಿ ನೇಮಕ..!



ಬೆಳಗಾವಿ : ಭಾರತೀಯ ಜನತಾ ಪಕ್ಷದ ಯುವ ನಾಯಕ ಹಾಗೂ ಆಲ್ ಇಂಡಿಯಾ ಬಂಜಾರ ಸೇವಾ ಸಂಘದ ಬೆಳಗಾವಿ ಜಿಲ್ಲಾಧ್ಯಕ್ಷರಾದ ಮಂಜುನಾಥ ಪಮ್ಮಾರ ಅವರನ್ನು ಬಿಜೆಪಿ ಜಿಲ್ಲಾ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ಸೂಚನೆ ಮೇರೆಗೆ ಮಂಜುನಾಥ ಅವರನ್ನು ಬಿಜೆಪಿ ಬೆಳಗಾವಿ ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಕಾರ್ಯದರ್ಶಿಯನ್ನಾಗಿ ನೇಮಿಸಿ ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ ಆದೇಶ ಹೊರಡಿಸಿದ್ದಾರೆ.

ಈ ಹಿಂದೆಯೂ ಮಂಜುನಾಥ ಅವರು ಪಕ್ಷದಲ್ಲಿ ಮಹತ್ವದ ಜವಾಬ್ದಾರಿ ನಿಭಾಯಿಸಿ ಹಿರಿಯ ನಾಯಕರ ವಿಶ್ವಾಸ ಗಳಿಸಿದ್ದಾರೆ. ಸಧ್ಯ ಬಿಜೆಪಿ ಪಕ್ಷ ಮತ್ತೊಂದು ಜವಾಬ್ದಾರಿ ನೀಡಿದ್ದು ಇವರ ಆಯ್ಕೆಯನ್ನು ಅಭಿಮಾನಿಗಳು ಸಂಭ್ರಮಿಸಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!