ಮೇಕೆದಾಟುವಿನ ಕೊರೊನಾ ಸೋಂಕು ಬೆಳಗಾವಿಗೂ ಹರಡುವ ಭೀತಿ
ಬೆಳಗಾವಿ : ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೆಸ್ ಪಕ್ಷ ಪಾದಯಾತ್ರೆ ಹಮ್ಮಿಕೊಂಡಿದ್ದು, ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ಶಾಸಕರು, ಸೇರಿದಂತೆ ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ದಾರೆ. ಸಧ್ಯ ಹೋರಾಟದಲ್ಲಿ ಪಾಲ್ಗೊಂಡ ಶಾಸಕರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು ಬೆಳಗಾವಿಗೂ ಸೋಂಕು ಹರಡುವ ಭೀತಿ ಎದುರಾಗಿದೆ.
ಹೌದು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್, ಯಮಕನಮರಡಿ ಶಾಸಕ ಸತೀಶ್ ಜಾರಕಿಹೊಳಿ ಸೇರಿದಂತೆ ಸಾವಿರಕ್ಕೂ ಅಧಿಕ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಮೇಕೆ ದಾಟು ಹೋರಾಟದಲ್ಲಿ ಪಾಲ್ಗೊಂಡಿದ್ದಾರೆ.
ಈ ಹೋರಾಟದಲ್ಲಿ ಭಾಗವಹಿಸಿದ್ದ ಹಲವರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಕಾಂಗ್ರೆಸ್ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ಗೌರಿಬಿದನೂರು ಶಾಸಕ ಎನ್ ಎಚ್ ಶಿವಶಂಕರರೆಡ್ಡಿಗೆ ಕೊರೊನಾ ಪಾಸಿಟಿವ್ ಬಂದಿದೆ. ಸಧ್ಯ ಶಾಸಕರು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದು, ನನ್ನ ಸಂಪರ್ಕದಲ್ಲಿದ್ದವರು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಹೇಳಿದ್ದಾರೆ. ರಾಜ್ಯದ ಮೂಲೆ ಮೂಲೆಗಳಿಂದ ಲಕ್ಷಾಂತರ ಜನ ಪಾದಯಾತ್ರೆಯಲ್ಲಿ ಪಾಲ್ಗೊಂಡು ಮರಳಿ ತಮ್ಮ ಊರಿಗೆ ತೆರಳುತ್ತಿದ್ದು ಸಧ್ಯ ಕೊರೋನಾ ಎಲ್ಲೆಡೆ ಹರಡುವ ಭೀತಿ ಎದುರಾಗಿದೆ.
ಇನ್ನೂ ಬೆಳಗಾವಿ ಜಿಲ್ಲೆಗೆ ಸಧ್ಯ ಮೇಕೆದಾಟುವಿನ ಸಂಕಷ್ಟ ಎದುರಾಗಿದ್ದು ಕೊರೊನಾ ರೂಪದಲ್ಲಿ ಜಿಲ್ಲೆಯ ಜನರಿಗೆ ತೊಂದರೆ ಉಂಟಾಗುವ ಸಂಭವ ಇದೆ. ಈ ಹಿನ್ನಲೆಯಲ್ಲಿ ಮೇಕೆ ದಾಟು ಪಾದಯಾತ್ರೆಯಲ್ಲಿ ಪಾಲ್ಗೊಂಡ ಬೆಳಗಾವಿ ಕಾಂಗ್ರೆಸ್ ಶಾಸಕಿಯರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಕೋವಿಡ್ ಪರೀಕ್ಷೆ ಮಾಡಿಸಿಕೊಂಡು ಸ್ವಲ್ಪ ದಿನದ ಮಟ್ಟಿಗೆ ಕ್ಷೇತ್ರದ ಕಾರ್ಯಕರ್ತರಿಂದ ದೂರ ಉಳಿದರೆ ಉತ್ತಮ ಎನ್ನುತ್ತಾರೆ ಸಾರ್ವಜನಿಕರು.
ನಮ್ಮ WHATS APP ಗ್ರುಪ್ ಸೇರಲು ಈ ಕೆಳಗಿನ ಲಿಂಕ್ ಒತ್ತಿ