
ಅಥಣಿ ಪಟ್ಟಣದಲ್ಲಿ ವಾಲ್ಮೀಕಿ ಸಮುದಾಯ ಭವನಕ್ಕೆ ಅಡಿಗಲ್ಲು

ಅಥಣಿ : ಪಟ್ಟಣದಲ್ಲಿ ಇಂದು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪರಿಶಿಷ್ಟ ಪಂಗಡ ಜನಾಂಗಕ್ಕೆ 150 ಲಕ್ಷ ರೂ. ವೆಚ್ಚದ ವಾಲ್ಮೀಕಿ ಸಮಾಜದ ಸಮುದಾಯಕ್ಕೆ ಅಡಿಗಲ್ಲು ಸಮಾರಂಭ ನೆರವೇರಿಸಲಾಯಿತು.
ಭಾನುವಾರ ಪಟ್ಟಣದ ಸತ್ಯ ಪ್ರಮೋದ್ ನಗರದಲ್ಲಿ ವಾಲ್ಮೀಕಿ ಸಮುದಾಯ ಭವನದ ಅಡಿಗಲ್ಲು ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ. ನಮ್ಮ ಸರ್ಕಾರದ ಆಡಳಿತಾವಧಿಯಲ್ಲಿ ಸರ್ವ ಜನಾಂಗದವರಿಗೂ ಸಮಾನ ಸೌಲಭ್ಯ ಕಲ್ಪಿಸುವ ಕೆಲಸ ಆಗಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಪರ ಕೆಲಸ ನಡೆಯಲಿವೆ ಎಂದರು.
ಈ ಸಂದರ್ಭದಲ್ಲಿ ಸಿದ್ರಾಯ್ ನಾಯ್ಕ್, ಶ್ರೀಶೈಲ್ ಗಸ್ತಿ ಬಾಬು ಹುಳ್ಯಾಳ್ ಮಹದೇವ್ ಬಿಸಲನಾಯ್ಕ್, ಈಶ್ವರ್ ಕುಂಬಾರ್, ವಾಲ್ಮೀಕಿ ಸಮಾಜದ ಬಂಧುಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.