
ಎಮ್ ಎಲ್ ಸಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಥಣಿಯ ಸುನೀಲ್ ಸಂಕ್ ಆಯ್ಕೆ

ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳನ್ನು ಒಳಗೊಂಡ ವಾಯವ್ಯ ಪದವೀಧರರ ಕ್ಷೇತ್ರದಿಂದ ವಿಧಾನಪರಿಷತ್‌ಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಿಲ್ಲೆಯ ಅಥಣಿಯ ಸುನೀಲ ಸಂಕ ಅವರಿಗೆ ಟಿಕೆಟ್ ನೀಡಲಾಗಿದೆ.

ಈಗಾಗಲೇ ಬಿಜೆಪಿ ಅಧಿಕೃತ ಅಭ್ಯರ್ಥಿಯಾಗಿ ಹನುಮಂತ ನಿರಾಣಿ ಆಯ್ಕೆಯಾಗಿದ್ದು ಕಾಂಗ್ರೆಸ್ ನಿಂದ ಅನೇಕರು ಸ್ಪರ್ಧೆಗೆ ಒಲವು ತೋರಿದ್ದರು. ಆದರೆ ಕೊನೆಗೆ ಅಥಣಿಯ ಕಾಂಗ್ರೆಸ್ ಮುಖಂಡ ಸುನೀಲ್ ಸಂಕ್ ಅಭ್ಯರ್ಥಿಯಾಗಿದ್ದಾರೆ.