ಮನರೇಗಾ ಕಾಮಗಾರಿ ಪರಿಶೀಲಿಸಿದ ಜಿಪಂ ಸಿಇಒ
ಕಾಗವಾಡ : ತಾಲೂಕಿನ ಶಿರಗುಪ್ಪಿ, ಮಂಗಸೂಳಿ ಗ್ರಾಮ ಪಂಚಾಯತಿ ವ್ಯಾಪ್ತಿ ಮನರೇಗಾ ಯೋಜನೆಯಡಿ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳನ್ನು ಶುಕ್ರವಾರ ಜಿಪಂ ಸಿಇಒ ದರ್ಶನ್ ಎಚ್ ವಿ ಅವರು ಪರಿಶೀಲನೆ ನಡೆಸಿದರು.
ರಸ್ತೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕೋಟಿವೃಕ್ಣ ಅಭಿಯಾನದಡಿ ನೆಡಲಾದ ಸಸಿಗಳ ಹಾಗೂ ಸರ್ಕಾರಿ ಶಾಲಾ ಆವರಣದಲ್ಲಿ ಪೌಷ್ಠಿಕ ತೋಟ
ವೀಕ್ಷಣೆ ಮಾಡಿದರು.
ಇದೇ ವೇಳೆ ಮಾತನಾಡಿದ ಅವರು, ಸಮುದಾಯ ಕಾಮಗಾರಿಗಳಿಗೆ ಆದ್ಯತೆ ನೀಡಿ ಅಲ್ಲದೇ ಎಲ್ಲ ಗ್ರಾಮ ಪಂಚಾಯತಿ ವ್ಯಾಪ್ತಿ ಸರ್ಕಾರಿ ಶಾಲಾ ಆವರಣದಲ್ಲಿ ಆಟದ ಮೈದಾನ ನಿರ್ಮಾಣ ಮಾಡುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಕಾಗವಾಡ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ವೀರನಗೌಡ ಏಗನಗೌಡರ್, ಅಥಣಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು, ಅರಣ್ಯ ಇಲಾಖೆ ಆರ್ ಎಫ್ ಓ, ಡಿಆರ್ ಎಫ್ ಓ, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕರು, ತಾಂತ್ರಿಕ ಹಾಗೂ ಐಇಸಿ ಸಂಯೋಜಕರು ಸೇರಿದಂತೆ ಮುಂತಾದವರು ಇದ್ದರು.