Select Page

Advertisement

ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ವಿರುದ್ಧ ಪ್ರಕರಣ ದಾಖಲು

ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು : ಬಿಜೆಪಿ ವಿರುದ್ಧ ಪ್ರತಿಭಟನೆ ಆಯೋಜಿಸಿದ್ದ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ವಿರುದ್ಧ ಬೆಂಗಳೂರು ಹೈಗ್ರೌಂಡ್ಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತದ ಭಾರತ್‌ ಜೋಡೊ ನ್ಯಾಯ ಯಾತ್ರೆಗೆ ಅಸ್ಸಾಂನಲ್ಲಿ ಅಡ್ಡಿಪಡಿಸಿದ್ದನ್ನು ವಿರೋಧಿಸಿ ರಾಜ್ಯದಲ್ಲಿ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ನಲಪಾಡ್ ನೇತೃತ್ವದಲ್ಲಿ ಪಂಜಿನ ಮೆರವಣೆಗೆ ನಡೆಸಲಾಯಿತು.
ಅನುಮತಿ ಪಡೆಯದೇ ಗುಂಪುಗೂಡಿ ಪ್ರತಿಭಟನೆ ನಡೆಸಿ ಸಾರ್ವಜನಿಕ ಸಂಚಾರಕ್ಕೆ ಅಡ್ಡಿಪಡಿಸಿರುವುದರಿಂದ ಹೈಗ್ರೌಂಡ್ ಠಾಣೆಯ ಇನ್‌ಸ್ಪೆಕ್ಟರ್ ಭರತ್ ಸ್ವಯಂ ಪ್ರೇರಿತರಾಗಿ ಕಾಂಗ್ರೆಸ್ ಯುವ ಮುಖಂಡ ಮೊಹಮ್ಮದ್ ನಲಪಾಡ್ ವಿರುದ್ಧ ದೂರು ದಾಖಲಿಸಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!