ಕಾಂಗ್ರೆಸ್ ಸೇರಿದ ಯಡಿಯೂರಪ್ಪ ಆಪ್ತ ಮೋಹನ್ ಲಿಂಬಿಕಾಯಿ
ಬೆಳಗಾವಿ : ರಾಜ್ಯ ಬಿಜೆಪಿ ಹಿರಿಯ ನಾಯಕ ಹಾಗೂ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಆಪ್ತ ಮೋಹನ್ ಲಿಂಬಿಕಾಯಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು.
ಗುರುವಾರ ಸಾಯಂಕಾಲ ನಗರದ ಕಾಂಗ್ರೆಸ್ ಭವನದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ ಸಿಂಗ್ ಸುರ್ಜೇವಾಲಾ, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬಿಜೆಪಿ ತ್ಯಜಿಸಿ ಕೆಜೆಪಿ ಕಟ್ಟಿದಾಗ ಮೊದಲನೆಯದಾಗಿ ರಾಜೀನಾಮೆ ಸಲ್ಲಿಸಿದ್ದು ಮೋಹನ್ ಲಿಂಬಿಕಾಯಿ ಅವರಾಗಿದ್ದರು. ಅಂದು ವಿಧಾನಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿ ಬಿಎಸ್ವೈ ಹಿಂದೆ ಸಾಗಿದ್ದರು. ಹುಬ್ಬಳ್ಳಿ – ಧಾರವಾಡ ಪಶ್ಚಿಮ ಕ್ಷೇತ್ರದಿಂದ ಕೆಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದು ಸೋತಿದ್ದರು.
ನಂತರ ಯಡಿಯೂರಪ್ಪ ಪಕ್ಷಕ್ಕೆ ಮರಳಿದ ನಂತರ ಅವರ ಹಿಂದೆಯೇ ಲಿಂಬಿಕಾಯಿ ಕೂಡ ಬಿಜೆಪಿಗೆ ವಾಪಸ್ ಆಗಿದ್ದರು. ಅಲ್ಲದೇ, ಮೈತ್ರಿ ಸರ್ಕಾರ ಪತನಗೊಂಡ 2019ರಲ್ಲಿ ಯಡಿಯೂರಪ್ಪ ಸಿಎಂ ಆಗಿದ್ದ ವೇಳೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾಗಿ ಕೆಲಸ ಮಾಡಿದ್ದರು.
**********
ರಾಜ್ಯ ಬಿಜೆಪಿಯಲ್ಲಿ ಪ್ರಾಮಾಣಿಕ ಕಾರ್ಯಕರ್ತರಿಗೆ ಸ್ಥಾನಮಾನ ಇಲ್ಲ. ಇಲ್ಲಿ ಉಸಿರು ಕಟ್ಟುವ ವಾತಾವರಣವಿದೆ. ಯಾವುದೇ ಶರತ್ತಿಲ್ಲದೆ ನಾನು ಕಾಂಗ್ರೆಸ್ ಸೇರ್ಪಡೆಯಾಗಿರುವೆ. ಶಿಸ್ತಿನ ಸಿಪಾಯಿಯಂತೆ ದುಡಿದರು ಬಿಜೆಪಿಯಲ್ಲಿ ಬೆಲೆ ಇರಲಿಲ್ಲ.
ಮೋಹನ್ ಲಿಂಬಿಕಾಯಿ
**************