ಮೃಣಾಲ್ ಹೆಬ್ಬಾಳಕರ್ ಕಾರು ಚಾಲಕನ ಮೇಲೆ ಚಾಕು ಇರಿತ ; ಆಸ್ಪತ್ರೆಗೆ ದಾಖಲು
ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪುತ್ರ ಹಾಗೂ ಕಾಂಗ್ರೆಸ್ ಯುವ ನಾಯಕ ಮೃನಾಲ್ ಹೆಬ್ಬಾಳಕರ್ ಅವರ ಕಾರು ಚಾಲಕನ ಮೇಲೆ ಕಿಡಿಗೇಡಿಗಳು ದಾಳಿ ನಡೆಸಿರುವ ಘಟನೆ ಬೆಳಗಾವಿ ನಗರದಲ್ಲಿ ನಡೆದಿದೆ.
ಬೆಳಗುಂದಿ ಗ್ರಾಮದ ಬಸವಂತ ಕಡೋಲ್ಕರ ಮೇಲೆ ದಾಳಿ ನಡೆದಿದೆ. ಬೈಕ್ ಮೇಲೆ ಬಂದಿದ್ದ ಇಬ್ಬರು ದಾಳಿ ನಡೆಸಿ ಪರಾರಿಯಾಗಿದ್ದಾರೆ. ಚಾಲಕನ ಮೇಲೆ ನಾಲ್ಕಾರು ಬಾರಿ ಚಾಕುವಿನಿಂದ ಇರಿಯಲಾಗಿದೆ.
ಗಂಭೀರವಾಗಿ ಗಾಯಗೊಂಡ ಬಸವಂತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿನೀಡಿದ್ದಾರೆ.


