ಸಿಎಂ ಸಿದ್ದರಾಮಯ್ಯಗೆ ಲೋಕಾಯುಕ್ತ ಕ್ಲೀನ್ ಚಿಟ್
ಬೆಂಗಳೂರು : ಮುಡಾ ಪ್ರಕರಣದ ಆರೋಪದಲ್ಲಿ ಲೋಕಾಯುಕ್ತ ತನಿಖೆ ವರದಿ ಬಹಿರಂಗಗೊಂಡಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ನೀಡಲಾಗಿದೆ.
ನಾಳೆ ನ್ಯಾಯಾಲಯಕ್ಕೆ ಲೋಕಾಯುಕ್ತ ಅಧಿಕಾರಿಗಳು ಬಿ ರಿಪೋರ್ಟ್ ಸಲ್ಲಿಸಲು ಮುಂದಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ಸಿಕ್ಕಿದೆ.
ಲೋಕಾಯುಕ್ತ ವರದಿ ಕುರಿತು ಮುಡಾ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಅವರು ಪ್ರತಿಕ್ರಿಯೆ ನೀಡಿದ್ದು, ಅಸಮಾಧಾನ ಹೊರಹಾಕಿದ್ದಾರೆ. ಈ ಕುರಿತು ನ್ಯಾಯಾಲಯಕ್ಕೆ ಹೋಗುವುದಾಗಿ ಹೇಳಿದ್ದಾರೆ.


