ಮೂಡಲಗಿ : ಖೇಲೋ ಇಂಡಿಯಾಗೆ ಇಬ್ಬರು ವಿದ್ಯಾರ್ಥಿನಿಯರು ಆಯ್ಕೆ
ಮೂಡಲಗಿ : ತಾಲೂಕಿನ ಶಿವಾಪೂರ(ಹ ) ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಇಬ್ಬರು ವಿದ್ಯಾರ್ಥಿನಿಯರು ರಾಷ್ಟ್ರ ಮಟ್ಟದ ಖೇಲೋ ಇಂಡಿಯಾ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಕಾವೇರಿ ಪಾಟೀಲ ಹಾಗೂ ತನು ಗದಾಡಿ ಈ ಇಬ್ಬರು ವಿದ್ಯಾರ್ಥಿನಿಯರು ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಕ್ಯಾತನಹಳ್ಳಿಯಲ್ಲಿ ನಡೆದ ರಾಷ್ಟ್ರ ಮಟ್ಟದ ಖೇಲೋ ಇಂಡಿಯಾ ತಂಡಕ್ಕೆ 14 ವರ್ಷದ ಒಳಗಿನ ಖೋಖೊ ಕ್ರೀಡೆಗೆ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಕರ್ನಾಟಕ ರಾಜ್ಯ ತಂಡದಲ್ಲಿ ಆಯ್ಕೆಯಾಗಿದ್ದಾರೆ.
ಆಯ್ಕೆಯಾದ ವಿದ್ಯಾರ್ಥಿನಿಯರನ್ನು ಹಾಗೂ ಆಯ್ಕೆಗೆ ಶ್ರಮಿಸಿದ ಶಾಲೆಯ ಪ್ರದಾನ ಗುರುಗಳಾದ ಗಜಾನನ ಪತ್ತಾರ, ದೈಹಿಕ ಶಿಕ್ಷಕರಾದ ಯಾಕೂಬ್ ಮುಜಾವರ, ಪ್ರಕಾಶ್ ಮಾವರಕರ ಹಾಗೂ ಎಲ್ಲ ಸಿಬ್ಬಂದಿ ವರ್ಗದವರನ್ನು ಹಾಗೂ ಮಾರ್ಗದರ್ಶಕರನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ್ ಮನ್ನಿಕೇರಿ ಹಾಗೂ ಎಸ್ ಡಿ ಎಂ ಸಿ ಅಧ್ಯಕ್ಷರು,ಸದಸ್ಯರು ,ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು , ಸಂಘ ಸಂಸ್ಥೆಯ ಪದಾಧಿಕಾರಿಗಳು ಹಾಗೂ ಶ್ರಮಿಸಿದ ಎಲ್ಲರಿಗೂ ಅಭಿನಂದಿಸಿ ಹರ್ಷವ್ಯಕ್ತಪಡಿಸಿದ್ದಾರೆ.


