Select Page

Advertisement

ಬಿಜೆಪಿ ಶಾಸಕನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

ಬಿಜೆಪಿ ಶಾಸಕನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

ಬೆಂಗಳೂರು : ಜಾತಿ ನಿಂದನೆ ಹಾಗೂ ಕೊಲೆ ಬೆದರಿಕೆ ಆರೋಪದ ಮೇಲೆ ಜೈಲು ಸೇರಿರುವ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಈಗ ಅತ್ಯಾಚಾರ ಪ್ರಕರಣ ದಾಖಲಾಗಿದೆ.

ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೋಟ್೯ ಜಾಮೀನು ಕುರಿತು ಆದೇಶ ಹೊರಡಿಸಲಿದೆ. ಈ ಮಧ್ಯೆ ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಮಾಜಿ ಮಂತ್ರಿಗೆ ಸಂಕಷ್ಟ ಬಂದೊದಗಿದೆ.

ಈ ಕುರಿತು ಪ್ರಕರಣ ದಾಖಲಿಸಿರುವ ಮಹಿಳೆ ಕೆಲ ದಿನಗಳ ಹಿಂದೆ ಗೊಡೌನ್ ಗೆ ಕರೆಸಿಕೊಂಡಿದ್ದ ಮುನಿರತ್ನ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ ಮಾಡಿದ್ದಾರೆ ಎಂದು ಮಹಿಳೆ ಎಫ್ಐಆರ್ ನಲ್ಲಿ ಉಲ್ಲೇಖ ಮಾಡಿದ್ದಾಳೆ.

ಮುನಿರತ್ನ ಸೇರಿ ಏಳು ಜನರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಕಗ್ಗಲೀಪುರ ಪೊಲೀಸ್ ಠಾಣೆ ಪೊಲೀಸರು ಮಹಿಳೆಯನ್ನು ತಪಾಸಣೆಗೆ ಕರೆದುಕೊಂಡು ಹೋಗಿದ್ದಾರೆ ಎಂದು ತಿಳಿದುಬಂದಿದೆ.

Advertisement

Leave a reply

Your email address will not be published. Required fields are marked *

error: Content is protected !!