ಬೆಳಗಾವಿ : ಜಮೀನು ಮಾರಾಟ ಮಾಡುವ ವಿಚಾರವಾಗಿ ಎರಡು ಕುಟುಂಬಗಳ ನಡುವೆ ಉಂಟಾದ ಜಗಳ (Family dispute) ವಿಕೋಪಕ್ಕೆ ತಿರುಗಿ, ಅಣ್ಣನೇ ಸ್ವಂತ ತಮ್ಮನನ್ನು (Brother) ಕಲ್ಲಿನಿಂದ ಜಜ್ಜಿ ಕುತ್ತಿಗೆ ಹಿಸುಕಿ ಭೀಕರವಾಗಿ ಕೊಲೆ (Crime) ಮಾಡಿದ ಭಯಾನಕ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹೊರಡಗೇರಿ ಗ್ರಾಮದಲ್ಲಿ ಸಂಭವಿಸಿದೆ.
ಮೃತನನ್ನು ರಾಜು ಸಿದ್ದಪ್ಪ ರುದ್ರಪ್ಪಗೋಳ (45) ಎಂದು ಗುರುತಿಸಲಾಗಿದೆ. ಆತನ ಅಣ್ಣ ಸಂಜು ರುದ್ರಪ್ಪಗೋಳ (49) ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಘೊಡಗೇರಿ ಗ್ರಾಮದಲ್ಲಿರುವ ಮೂರು ಎಕರೆ ಜಮೀನನ್ನು ಮಾರಾಟ ಮಾಡುವ ವಿಷಯದಲ್ಲಿ ಇಬ್ಬರ ನಡುವೆ ತೀವ್ರ ಮಾತಿನ ಚಕಮಕಿ ನಡೆದಿತ್ತು ಎಂದು ತಿಳಿದುಬಂದಿದೆ.
ಕೊಲೆಯಾದ ರಾಜು ಹಾಗೂ ಆರೋಪಿ ಸಂಜು ಗೋಕಾಕ್ ತಾಲೂಕಿನ ಅಂಕಲಗಿ ಗ್ರಾಮದ ತಲೆಗೆ ಹಾಕಿಕೊಂಡು ಅಂಕಲಗಿ ಗ್ರಾಮದ ಪಾಳುಬಿದ್ದ ಕಟ್ಟಡವೊಂದರಲ್ಲಿ ವಾಸವಿದ್ದರು. ಕೂಲಿ ಕೆಲಸ ಮಾಡಿಕೊಂಡಿದ್ದ ಇವರಿಬ್ಬರು, ಪ್ರತಿದಿನ ರಾತ್ರಿ ಅಂಕಲಗಿ ಮಠದಲ್ಲಿ ಊಟ ಮುಗಿಸಿ ಅದೇ ಹಳೆಯ ಕಟ್ಟಡದಲ್ಲಿ ರಾತ್ರಿ ಕಳೆಯುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಆರಂಭದಲ್ಲಿ ಇಬ್ಬರೂ ಕುಟುಂಬಗಳಿಂದ ಯಾವುದೇ ದೂರು ದಾಖಲಾಗಿರಲಿಲ್ಲ. ಸದ್ಯ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಲಾಗಿದ್ದು ಎಂದು ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಕೆ. ರಾಮರಾಜನ್ ಅವರು ಸುದ್ದಿಗೋಷ್ಠಿಯಲ್ಲಿ ವಿವರಿಸಿದ್ದಾರೆ.



