VIDEO : ಚಂದ್ರಶೇಖರ ಗುರೂಜಿ ಹಂತಕರ ಬಂಧನ ವೀಡಿಯೋ ನೋಡಿ
ಬೆಳಗಾವಿ : ಸರಳವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಅವರನ್ನು ಹುಬ್ಬಳ್ಳಿ ಖಾಸಗಿ ಹೊಟೇಲ್ ನಲ್ಲಿ ಕೊಚ್ಚಿ ಕೊಲೆ ಮಾಡಿದ್ದ ಹಂತಕರನ್ನು ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನಲ್ಲಿ ಬಂಧಿಸಲಾಗಿದೆ.
ಹುಬ್ಬಳ್ಳಿ ಪೊಲೀಸರಿಗೆ ಹಂತಕರು ಬೆಳಗಾವಿ ಕಡೆ ಹೋಗುತ್ತಿರುವ ಮಾಹಿತಿ ನೀಡಿದ್ದರು. ಈ ಹಿನ್ನಲೆಯಲ್ಲಿ ರಾಮದುರ್ಗ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಸರಳ ವಾಸ್ತು ಖ್ಯಾತಿಯ ವಾಸ್ತು ತಜ್ಞ ಚಂದ್ರಶೇಖರ್ ಗುರೂಜಿ ಅವರನ್ನು ಹುಬ್ಬಳ್ಳಿಯ ಖಾಸಗಿ ಹೋಟೆಲ್ನಲ್ಲಿ ಮಂಗಳವಾರ ಹಾಡಹಗಲೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಇಲ್ಲಿನ ಉಣಕಲ್ ಕೆರೆ ಬಳಿಯ ಖಾಸಗಿ ಹೋಟೆಲ್ನ ಸ್ವಾಗತಕಾರ ಕೌಂಟರ್ ಬಳಿ ಭಕ್ತರ ಸೋಗಿನಲ್ಲಿ ಬಂದ ದುಷ್ಕಮರ್ಿಗಳು ಗುರೂಜಿ ಮೇಲೆ ಏಕಾಏಕಿ ದಾಳಿ ನಡೆಸಿ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಚಂದ್ರಶೇಖರ್ ಗುರೂಜಿ ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ದುಷ್ಕರ್ಮಿಗಳು ಚಂದ್ರಶೇಖರ ಗುರೂಜಿ ಅವರನ್ನು ಮಾತನಾಡಿಸಿದವರಂತೆ ಮಾಡಿ ಏಕಾಏಕಿ ಚಾಕುವಿನಿಂದ ದಾಳಿ ಮಾಡಿ ಹತ್ಯೆಗೈದು ಪರಾರಿಯಾಗಿದ್ದು, ಈ ದೃಶ್ಯಗಳು ಸಿಸಿಟಿವಿಯಲ್ಲಿ ದೊರೆತಿದ್ದು, ಅವರ ಪತ್ತೆಗೆ ಜಾಲ ಬೀಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಘಟನಾ ಸ್ಥಳಕ್ಕೆ ಸಾಹಿಲ ಬಾಗ್ಲಾ, ಗೋಪಾಲ ಬ್ಯಾಕೋಡ ಆಗಮಿಸಿ ಪರಿಶೀಲಿಸುತ್ತಿದ್ದಾರೆ.