ಮಾಜಿ ಸಚಿವ ಮುರುಗೇಶ್ ನಿರಾಣಿ ತಾಯಿ ಲಿಂಗೈಕ್ಯ
ಬಾಗಲಕೋಟೆ: ಮಾಜಿ ಸಚಿವ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಮುರುಗೇಶ್ ನಿರಾಣಿ ಅವರಿಗೆ ಮಾತೃ ವಿಯೋಗವಾಗಿದೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸುಶಿಲಾಬಾಯಿ ನಿರಾಣಿ (78) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸೋಮವಾರ ಚಿಕಿತ್ಸೆ ಫಲಕಾರಿ ಆಗದೆ ವಿಧಿವಶರಾಗಿದ್ದಾರೆ.
ಸುಶಿಲಾಬಾಯಿಯವರು ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಬಸವಹಂಚಿನಾಳ ಗ್ರಾಮದಲ್ಲಿ ನೆಲೆಸಿದ್ದರು. ಮಂಗಳವಾರ ಮದ್ಯಾಹ್ನ 1 ಗಂಟೆಗೆ ಸ್ವಗ್ರಾಮ ಬಸವಹಂಚಿನಾಳದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.
ಕೃಷಿ ಪ್ರಧಾನ ಕುಟುಂಬದ ನಿರಾಣಿ ಪರಿವಾರದ ಮನೆಯೊಡತಿ ಯಾಗಿದ್ದ ಸುಶಿಲಾಬಾಯಿ ಅವರ ಅಗಲಿಕೆಯಿಂದ ನಿರಾಣಿ ಅವರ ಅಪಾರ ಬಂಧು ಬಳಗ ದುಃಖದಲ್ಲಿ ಮುಳುಗಿದೆ.

