ಅಧಿಕಾರ ಬಲದಿಂದ ಮೆರೆಯುತ್ತಿದ್ದವರಿಗೆ ಜನರಿಂದ ತಕ್ಕ ಉತ್ತರ ; ಹೆಬ್ಬಾಳಕರ್ ವಿರುದ್ಧ ನಿರಾಣಿ ಪರೋಕ್ಷ ವಾಗ್ದಾಳಿ
ಬೆಳಗಾವಿ : ಅಧಿಕಾರ ಹಾಗೂ ಹಣದ ಬಲದಿಂದ ಮೆರೆಯುತ್ತಿದ್ದವರಿಗೆ ಜನರೇ ತಕ್ಕ ಪಾಠ ಕಲಿಸಿದ್ದಾರೆ. ಕಾರ್ಯಕರ್ತರ ಶಕ್ತಿ ಹಾಗೂ ಪರಿಶ್ರಮದ ಫಲವಾಗಿ ಜಗದೀಶ್ ಶೆಟ್ಟರ್ ಅವರ ಗೆಲುವಾಗಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುರುಗೇಶ ನಿರಾಣಿ ಅಭಿಪ್ರಾಯಪಟ್ಟರು.
ಬೆಳಗಾವಿ ಗ್ರಾಮಾಂತರ ವಿಭಾಗದ ವತಿಯಿಂದ ಶುಕ್ರವಾರ ಜಿಲ್ಲಾ ಕಾರ್ಯಕಾರಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಇವರು. ಬೆಳಗಾವಿ ಜನ ಜಗದೀಶ್ ಶೆಟ್ಟರ್ ಅವರನ್ನು ಗೆಲ್ಲಿಸುವ ಮೂಲಕ ಹಣ ಹಾಗೂ ಅಧಿಕಾರ ಬಲದಿಂದ ಮೆರೆಯುತ್ತಿದ್ದವರಿಗೆ ತಕ್ಕ ಉತ್ತರ ನೀಡಿದ್ದಾರೆ ಎಂದು ಪರೋಕ್ಷವಾಗಿ ಸಚಿವೆ ಹೆಬ್ಬಾಳಕರ್ ವಿರುದ್ಧ ಆಕ್ರೋಶ ಹೊರಹಾಕಿದರು.
ಸಂಸದ ಜಗದೀಶ್ ಶೆಟ್ಟರ್ ಮಾತನಾಡಿ. ಬೆಳಗಾವಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸುತ್ತೇನೆ. ಈಗಾಗಲೇ ಹಲವು ಅಭಿವೃದ್ಧಿ ಯೋಜನೆಗಳ ಬಗ್ಗೆ ಕೇಂದ್ರ ಮಂತ್ರಿಗಳ ಜೊತೆ ಭೇಟಿಯಾಗಿ ಮಾತನಾಡಿದ್ದೇನೆ ಜಿಲ್ಲೆಗೆ ಹೊಸ ಯೋಜನೆಗಳನ್ನು ತರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೂ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟ 19 ಸ್ಥಾನದಲ್ಲಿ ಗೆಲುವು ಸಾಧಿಸಿದೆ. ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಜನ ತಕ್ಕ ಪಾಠ ಕಲಿಸಿದ್ದಾರೆ ಎಂದು ಹೇಳಿದರು
ಬೆಳಗಾವಿ ಗ್ರಾಮಂತರ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ್ ಮಾತನಾಡಿ. ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿ ಮೀರಿದ್ದು, ಕಾನೂನು ಬಾಹಿರ ಚಟುವಟಿಕೆ ಹೆಚ್ಚುತ್ತಿವೆ. ವಾಲ್ಮೀಕಿ ಅಭಿವೃದ್ಧಿ ನಿಗಮ ಹಾಗೂ ಮುಡಾ ಹಗರಣದ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಅನಿಲ್ ಬೆನಕೆ, ಸಂಸದ ಈರಣ್ಣ ಕಡಾಡಿ, ಮಾಜಿ ಸಂಸದೆ ಮಂಗಲ ಅಂಗಡಿ, ಮಾಜಿ ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ, ಮಾಜಿ ಶಾಸಕರಾದ ಸಂಜಯ್ ಪಾಟೀಲ್, ಜಗದೀಶ್ ಮೆಟಗುಡ್ಡ, ಮಹಾಂತೇಶ ದೊಡಗೌಡರ, ವಿಶ್ವನಾಥ್ ಪಾಟೀಲ್ , ಅರವಿಂದ ಪಾಟೀಲ, ರತ್ನಾ ಮಾಮನಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.