Breaking -ಚಿತ್ರದುರ್ಗ ಮುರುಘಾ ಶರಣರು ಪೊಲೀಸ್ ವಶಕ್ಕೆ
ಹಾವೇರಿ : ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಮೇಲೆ ಚಿತ್ರದುರ್ಗ ಮುರುಘಾ ಶರಣರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಳೆದ ಒಂದು ದಿನಗಳಿಂದ ಶ್ರೀಗಳ ಬಂಧನ ಮಾತು ಕೇಳಿಬಂದಿತ್ತು ಜೊತೆಗೆ ಶ್ರೀಗಳು ಅಜ್ಞಾತ ಸ್ಥಳಕ್ಕೆ ಹೋಗಿದ್ದಾರೆ ಎನ್ನಲಾಗಿತ್ತು. ಇವೆಲ್ಲವೂದಕ್ಕೆ ಸಧ್ಯ ಪುಷ್ಟಿ ಎಂಬಂತೆ ಚಿತ್ರದುರ್ಗ ಮುರುಘಾ ಶರಣರನ್ನು ಹಾವೇರಿಯ ಬಂಕಾಪುರದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮುರುಘಾಮಠ ಶಿವಮೂರ್ತಿ ಶರಣರ ವಿರುದ್ದ ಪೋಕ್ಸೋ ಕಾಯ್ದೆಯಡಿ ಮೈಸೂರಿನ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಕ್ಕಮಹಾದೇವಿ ವಸತಿ ನಿಲಯದ ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ಎಫ್ ಐಆರ್ ದಾಖಲಾಗಿತ್ತು.
ಶಿವಮೂರ್ತಿ ಮುರುಘಾ ಶರಣರ ವಿರುದ್ದ ದೂರಿನಲ್ಲೇನಿದೆ
ಚಂದ್ರಶೇಖರ್ ಎಂಬುವವರು ದೂರನ್ನು ನೀಡಿದ್ದಾರೆ. 26.08.22 ರಂದು ಚಂದ್ರ ಕುಮಾರ್ ರವರು ಜಿಲ್ಲಾ ಮಕ್ಕಳ ಕಲ್ಯಾಣ ಘಟಕ ಮೈಸೂರು ಜಿಲ್ಲೆ ಕಾನೂನು ಮತ್ತು ಪರಿವೀಕ್ಷಣಾಧಿಕಾರಿಯಾಗಿದ್ದು ಒಡನಾಡಿ ಸಂಸ್ಥೆಯವರು ಅಪ್ರಾಪ್ತ ಬಾಲಕಿರು ಅಕ್ಕಮಹಾದೇವಿ ವಸತಿ ನಿಲಯದ ನಿವಾಸಿಗಳಾಗಿರುತ್ತಾರೆ. ಈ ವಸತಿ ನಿಲಯವು ಚಿತ್ರದುರ್ಗ ಮುರುಘಾಮಠದ ಅಧೀನದಲ್ಲಿರುತ್ತದೆ. ಈ ಸಂಸ್ಥೆಯ ಮುಖ್ಯಸ್ಥರಾದ ಮಠದ ಸ್ವಾಜೀಜಿಗಳಾದ ಶಿವಮೂರ್ತಿ ಮುರುಗ ಶರಣರು ಇಬ್ಬರು ಅಪ್ರಾಪ್ತ ಬಾಲಕಿಯರಿಗೆ ಮೂರುವರೆ ವರ್ಷಗಳಿಂದ ಲೈಂಗಿಕ ದೌರ್ಜನ್ಯ ನೀಡುತ್ತಿದ್ದಾರೆ. ಇವರಿಗೆ ವಾರ್ಡನ್ ರಶ್ಮಿ, ಮಠದ ಮರಿಸ್ವಾಮಿಗಳಾದ ಬಸವಾದಿತ್ಯ , ಲಾಯರ್ ಗಂಗಾಧರಯ್ಯ, ಲೀಡರ್ ಪರಮ ಶಿವಯ್ಯ ಸಹಾಯವನ್ನು ಮಾಡಿರುತ್ತಾರೆ ಎಂದು ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರು ಪಡಿಸಿರುತ್ತಾರೆ. ಮಕ್ಕಳ ಹೇಳಿಕೆಯನ್ನು ಪಡೆದಿರುವ ವೇಳೆ ಲೈಂಗಿಕ ದೌರ್ಜನ್ಯ ನೀಡಿರುವುದು ತಿಳಿದು ಬಂದಿರುತ್ತದೆ. ಆರೋಪಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಮನವಿಯನ್ನು ಮಾಡಿದ್ದು ಮಕ್ಕಳಿಗೆ ತಾತ್ಕಾಲಿಕವಾಗಿ ಒಡನಾಡಿ ಸಂಸ್ಥೆಯಲ್ಲಿ ವಸತಿಯನ್ನು ಕಲ್ಪಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.