ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ವ್ಯಕ್ತಿ ಬಂಧನ..!

ಚಾಮರಾಜನಗರ : ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ಸೈಕೋ ವ್ಯಕ್ತಿಯನ್ನು ಪೊಲೀಸರರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಚಾಮರಾಜನಗರ್ ಹೌಸಿಂಗ್ ಬೋರ್ಡ್ ನಲ್ಲಿ ಕಳೆದ ಎರಡು ತಿಂಗಳಿನಿಂದ ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ವೀಡಿಯೋ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಕಳ್ಳತನ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಅಮೃತ್ ಎಂಬ ವ್ಯಕ್ತಿಯನ್ನು ಬಂಧಿಸಲಾಗಿದ್ದು ಈತನೂ ಹೌಸಿಂಗ್ ಬೋರ್ಡ್ ನಿವಾಸಿಯಾಗಿದ್ದಾನೆ. ಪ್ರತಿಷ್ಠಿತ ಖಾಸಗಿ ಕಂಪನಿಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದಾನೆ.
ಪ್ರಕರಣದ ತನಿಖೆ ಆರಂಭಿಸಿದ ಪೊಲೀಸರು ಬಡಾವಣೆಗಳ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದಾಗ ಬೆಚ್ಚಿಬೀಳಿಸುವ ದೃಶ್ಯಗಳು ಕಂಡುಬಂದಿದ್ದವು. ಮಧ್ಯರಾತ್ರಿ 1 ರಿಂದ 3 ಗಂಟೆಯ ಸಮಯದಲ್ಲಿ ವ್ಯಕ್ತಿಯೊಬ್ಬ ಮಹಿಳೆಯರ ಬಟ್ಟೆಗಳನ್ನು ಧರಿಸಿ, ಮುಖಕ್ಕೆ ಮುಸುಕು ಹಾಕಿಕೊಂಡು ಜನವಸತಿ ಪ್ರದೇಶಗಳಲ್ಲಿ ಸಂಶಯಾಸ್ಪದವಾಗಿ ಓಡಾಡುತ್ತಿರುವುದು ಕಂಡುಬಂದಿತ್ತು. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಪೊಲೀಸರು ಕೊನೆಗೂ ಆರೋಪಿ ಅಮೃತ್‌ನನ್ನು ಸೆರೆಹಿಡಿದಿದ್ದಾರೆ.
ಮಾನಸಿಕ ಅಸ್ವಸ್ಥತನಾಗಿರುವ ಈ ವ್ಯಕ್ತಿ ದಿನಾ ರಾತ್ರಿ ಮಹಿಳೆಯರ ಒಳ ಉಡುಪು ಕದಿಯುವ ಕೆಲಸ ಮಾಡುತ್ತಿದ್ದ. ಈತನನ್ನು ಪೊಲೀಸರು ಬಂಧಿಸಿ ಮಾನಸಿಕ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್ ಆಸ್ಪತ್ರೆಗೆ ದಾಖಲಿಸಿದ್ದಾರೆ.


