ಸಿಎಂ ಸಿದ್ದರಾಮಯ್ಯ ವಿರುದ್ಧ FIR ದಾಖಲು…..?
ಬೆಂಗಳೂರು : ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಒಂದು ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಎಫ್ಐಆರ್ ದಾಖಲಾಗುತ್ತದೆ ಎಂದು ಹೇಳಲಾಗ್ತಿದ್ದು, ಈ ಕುರಿತು ಮತ್ತಷ್ಟು ಕುತೂಹಲ ಹೆಚ್ಚಿದೆ.
ಹೈಕೋರ್ಟ್ ತೀರ್ಪಿನ ನಂತರ ಜನಪ್ರತಿನಿಧಿಗಳ ನ್ಯಾಯಾಲಯ ಸಿಎಂ ವಿರುದ್ಧ ತನಿಖೆ ನಡೆಸಿ ವರದಿ ನೀಡುವಂತೆ ಆದೇಶ ನೀಡಿತ್ತು. ನ್ಯಾ. ಗಜಾನನ್ ಭಟ್ ಅವರಿದ್ದ ನ್ಯಾಯಪೀಠ ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪಾತ್ರದ ಕುರಿತು ತನಿಖೆ ನಡೆಸಿ ಮೂರು ತಿಂಗಳ ಒಳಗಾಗಿ ವರದಿ ನೀಡುವಂತೆ ಆದೇಶ ನೀಡಿತ್ತು.
ಸಧ್ಯ ಮೈಸೂರು ಲೋಕಾಯುಕ್ತ ಅಂಗಳದಲ್ಲಿ ಕೇಸ್ ಇರುವುದರಿಂದ ಎಸ್ಪಿ ಉದೇಶ್ ಇನ್ನೇನು ಎಫ್ಐಆರ್ ದಾಖಲಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಎಡಿಜಿಪಿ ಮನೀಶ್ ಕರ್ಬಿಕರ್ ಮೈಸೂರು ಲೋಕಾಯುಕ್ತ ಎಸ್ಪಿ ಅವರಿಗೆ ದಾಖಲೆ ಕಳುಹಿಸಿದ್ದು ಎಫ್ಐಆರ್ ಗೆ ಸಿದ್ದತೆ ನಡೆದಿದೆ ಎನ್ನಲಾಗುತ್ತಿದೆ.


