Select Page

ಸ್ವಾಮಿ ವಿವೇಕಾನಂದ ಸದ್ಭಾವನಾ ಪ್ರಶಸ್ತಿಗೆ ನಾಗೇಂದ್ರ ಚೌಗಲಾ ಆಯ್ಕೆ

ಸ್ವಾಮಿ ವಿವೇಕಾನಂದ ಸದ್ಭಾವನಾ ಪ್ರಶಸ್ತಿಗೆ ನಾಗೇಂದ್ರ ಚೌಗಲಾ ಆಯ್ಕೆ

ಬೆಳಗಾವಿ : ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ವಿಜಯಪುರ ಜಿಲ್ಲಾ ಘಟಕ ಘಟಕದಿಂದ ಕೊಡಮಾಡುವ 2024 – 25 ಸಾಲಿನ ಸ್ವಾಮಿ ವಿವೇಕಾನಂದ ಸದ್ಭಾವನಾ ರಾಜ್ಯ ಪ್ರಶಸ್ತಿಗೆ ಸಾಮಾಜಿಕ ಕಾರ್ಯಕರ್ತ ನಾಗೇಂದ್ರ ಚೌಗಲಾ ಆಯ್ಕೆಯಾಗಿದ್ದಾರೆ.

ಖಾನಾಪುರ ತಾಲೂಕಿನ ಕಾಮಶಿನಕೊಪ್ಪ ಗ್ರಾಮದ ಕರ್ನಾಟಕ ಗ್ರಾಮೀಣ ಅಭಿವೃದ್ಧಿ ಸಂಘದ ಅಧ್ಯಕ್ಷ ನಾಗೇಂದ್ರ ಚೌಗಲಾ ಅವರು ಹತ್ತಾರು ವರ್ಷಗಳಿಂದ ವಿವಿಧ ರಂಗದಲ್ಲಿ ನಿರಂತರ ಸೇವೆ ಸಲ್ಲಿಸಿದ್ದಕ್ಕೆ ಈ ಪ್ರಶಸ್ತಿ ಲಭಿಸಿದೆ ಎಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ರಾಜಾಧ್ಯಕ್ಷರಾದ ಡಾ. ಎಸ್ ಬಾಲಾಜಿ ಅಭಿಪ್ರಾಯಪಟ್ಟರು.

ಫೆ. 5 ರಂದು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ನಾಗೇಂದ್ರ ಚೌಗಲಾ ಅವರಿಗೆ ಸ್ವಾಮಿ ವಿವೇಕಾನಂದ ಸದ್ಭಾವನಾ ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದೇವೆ ಎಂದು ಸಿದ್ದಣ್ಣ ದುರದುಂಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

,

Advertisement

Leave a reply

Your email address will not be published. Required fields are marked *

error: Content is protected !!