ಪ್ರಧಾನಿ ನರೇಂದ್ರ ಮೋದಿ ಸಮಾವೇಶಕ್ಕೆ ಹರಿದುಬಂದ ಜನಸಾಗರ
ಬೆಳಗಾವಿ : ಪ್ರಧಾನಿ ನರೇಂದ್ರ ಮೋದಿಯವರ ಅದ್ಧೂರಿ ಸಮಾವೇಶಕ್ಕೆ ಬೆಳಗಾವಿ ಜಿಲ್ಲೆಯಾದ್ಯಂತ ಜನಸಾಗರ ಹರಿದುಬರುತ್ತಿದೆ.
ನಗರದ ಯಡಿಯೂರಪ್ಪ ಮಾರ್ಗದ ಮಾಲಿನಿ ಸಿಟಿಯಲ್ಲಿ ಬಿಜೆಪಿ ವಿಜಯ ಸಂಕಲ್ಪ ಸಮಾವೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಬೆಳಗಾವಿ ನಗರ ಸೇರಿದಂತೆ ಜಿಲ್ಲೆಯ ಸಹಸ್ರಾರು ಕಾರ್ಯಕರ್ತರು ಈ ಸಮಾವೇಶಕ್ಕೆ ಆಗಮಿಸಿದ್ದಾರೆ.
ಕೊರಳಲ್ಲಿ ಕೇಸರಿ ಶಾಲು, ಕೈಯಲ್ಲಿ ಮೋದಿ ಭಾವಚಿತ್ರದ ಜಿತೆ ಜೈ ಶ್ರೀರಾಮ್ ಘೋಷಣೆ ಜೋರಾಗಿದ್ದು ಬಿಜೆಪಿ ಕಾರ್ಯಕರ್ತರಲ್ಲಿ ಉತ್ಸಾಹ ಜೋರಾಗಿದೆ. ಇನ್ನೇನು ಕೆಲವೇ ಕ್ಷಣದಲ್ಲಿ ಮೋದಿ ಸಮಾವೇಶಕ್ಕೆ ಆಗಮಿಸಲಿದ್ದಾರೆ.


