Select Page

Advertisement

ವಂಟಮೂರಿ ಪ್ರಕರಣ, ಜೈನಮುನಿ ಹತ್ಯೆ ಖಂಡಿಸಿದ ಪ್ರಧಾನಿ ಮೋದಿ

ವಂಟಮೂರಿ ಪ್ರಕರಣ, ಜೈನಮುನಿ ಹತ್ಯೆ ಖಂಡಿಸಿದ ಪ್ರಧಾನಿ ಮೋದಿ

ಬೆಳಗಾವಿ : ಕಳೆದ ಡಿಸೆಂಬರ್ ನಲ್ಲಿ ಬೆಳಗಾವಿಯ ಹೊಸ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣ ಹಾಗೂ ಚಿಕ್ಕೋಡಿಯಲ್ಲಿ ನಡೆದ ಜೈನಮುನಿ ಹತ್ಯೆ ಖಂಡಿಸಿದ ಪ್ರಧಾನಿ ನರೇಂದ್ರ ಮೋದಿಜಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.

ಬೆಳಗಾವಿ ನಗರದ ಮಾಲಿನಿ ಸಿಟಿಯಲ್ಲಿ ನಡೆದ ಬಿಜೆಪಿ ವಿಜಯ ಸಂಕಲ್ಪ ಸಮಾವೇಶ ಉದ್ದೇಶಿಸಿ ಮಾತನಾಡಿದ ಇವರು. ಕಾಂಗ್ರೆಸ್ ಸರ್ಕಾರದಲ್ಲಿ ಜನರ ಬದುಕು ಸಂಕಷ್ಟಕ್ಕೆ ಸಿಲುಕಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಚಿಕ್ಕೋಡಿ ಜೈನಮುನಿ ಹತ್ಯೆ, ಹುಬ್ಬಳ್ಳಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಹಾಗೂ ವಂಟಮೂರಿ ದಲಿತ ಮಹಿಳೆ ಮೇಲಿನ ಎಲ್ಲೆಯನ್ನು ಖಂಡಿಸಿದರು.

ಭಾಷಣದ ಉದ್ದಕ್ಕೂ ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದರು. ಜೊತೆಗೆ ಈ ಬಾರಿ ಚಿಕ್ಕೋಡಿ ಹಾಗೂ ಬೆಳಗಾವಿ ಲೋಕಸಭಾ ಅಭ್ಯರ್ಥಿ ಗೆಲ್ಲಿಸುವ ಮೂಲಕ ನನ್ನ ಕೈ ಬಲಪಡಿಸಿ ಎಂದರು.

Advertisement

Leave a reply

Your email address will not be published. Required fields are marked *

error: Content is protected !!