ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ವಿಚಾರಿಸಿದ ಪ್ರಧಾನಿ ನರೇಂದ್ರ ಮೋದಿ
ಜಮ್ಮು ಕಾಶ್ಮೀರ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಗ್ಯದಲ್ಲಿ ಏರುಪೇರು ಉಂಟಾದ ಹಿನ್ನಲೆಯಲ್ಲಿ ಸ್ವತಃ ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
ಜಮ್ಮು ಕಾಶ್ಮೀರದ ಕಥುವಾದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಭಾಷಣ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ತುಂಬಾ ಆಯಾಸವಾದಂತೆ ಕಂಡುಬಂದ ಖರ್ಗೆ ಅವರನ್ನು ಪಕ್ಕದಲ್ಲಿದ್ದ ಕಾಂಗ್ರೆಸ್ ನಾಯಕರು ಕೈ ಹಿಡಿದು ಕೂರಿಸಿದರು. ಈ ಸಂದರ್ಭದಲ್ಲಿ ತುಂಬಾ ಆಯಾಸದಲ್ಲೇ ಮಲ್ಲಿಕಾರ್ಜುನ ಖರ್ಗೆ ಕಂಡುಬಂದರು.
ನಂತರ ಇವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಆಸಿಡಿಟಿ ಸಮಸ್ಯೆಯಿಂದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಈ ರೀತಿ ಆಗಿದೆ ಎಂದು ತಿಳಿದುಬಂದಿತ್ತು.
ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿ ಖರ್ಗೆ ಆರೋಗ್ಯ ವಿಚಾರಿಸಿದ್ದಾರೆ. ಉತ್ತಮ ಆರೋಗ್ಯ ಹಾರೈಸಿದ್ದು ಅಧಿಕೃತ ಮೂಲಗಳಿಂದ ತಿಳಿದುಬಂದಿದೆ.
ಚಿಕಿತ್ಸೆ ನಂತರ ಚುನಾವಣಾ ಸಭೆ ಉದ್ದೇಶಿಸಿ ಮಾತನಾಡಿದ್ದ ಖರ್ಗೆ ಪ್ರಧಾನಿ ಮೋದಿಯವರನ್ನು ಅಧಿಕಾರದಿಂದ ಇಳಿಸುವ ವರೆಗೂ ನಾನು ಸಾಯುವುದಿಲ್ಲ ಎಂದು ಹೇಳಿದ್ದರು.