ಪ್ರಧಾನಿ ಮೋದಿ ಭೇಟಿ ವೇಳೆ ರಾಮದುರ್ಗದ ಕುರಿತು ಚರ್ಚೆ..! ಏನು ವಿಶೇಷ….?
ಬೆಳಗಾವಿ : ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್ ಶೆಟ್ಟರ್ ಶನಿವಾರ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಶುಭಾಶಯ ಕೋರಿದರು.
ಈ ಸಂದರ್ಭದಲ್ಲಿ ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿಗೆ ಕೇಂದ್ರದಿಂದ ನೂರು ಕೋಟಿ ರು. ಅನುದಾನ ಬಿಡುಗಡೆ ಮಾಡಿದ್ದಕ್ಕೆ ಕೃತಜ್ಞತೆ ಸಲ್ಲಿಸಿದರು. ಇದೇ ಮಾದರಿಯಲ್ಲಿ ರಾಮದುರ್ಗ ತಾಲೂಕಿನ ಐತಿಹಾಸಿಕ ಶಬರಿ ಕೊಳ್ಳ ಅಭಿವೃದ್ಧಿಪಡಿಸುವಂತೆ ಮನವಿ ಸಲ್ಲಿಸಿದರು.
ಬೆಂಗಳೂರು – ಧಾರವಾಡದ ನಡುವೆ ಸದ್ಯ ಸಂಚರಿಸುತ್ತಿರುವ ವಂದೇ ಭಾರತ ಎಕ್ಸ್ ಪ್ರೆಸ್ ರೈಲು ಸಂಚಾರವನ್ನು ಬೆಳಗಾವಿಯವರೆಗೆ ವಿಸ್ತರಿಸಬೇಕು.
ವಿಮಾನಯಾನ ಸೇವೆಗೆ ಸಂಬಂಧಿಸಿದಂತೆ ಉಡಾನ್ 3.0 ಯೋಜನೆ ಅವಧಿಯನ್ನು ಹೆಚ್ಚಿಸುವಂತೆ ಮನವಿ ಸಲ್ಲಿಸಿದರು. ಸಂಸದರ ಮನವಿಗೆ ಪ್ರಧಾನಿ ಮೋದಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಸಂಸದರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.