Select Page

ರೈತರ ಖಾತೆಗೆ 2 ಸಾವಿರ ರೂ. ಜಮೆ ಮಾಡಲಿದ್ದಾರೆ ಪ್ರಧಾನಿ ಮೋದಿ

ರೈತರ ಖಾತೆಗೆ 2 ಸಾವಿರ ರೂ. ಜಮೆ ಮಾಡಲಿದ್ದಾರೆ ಪ್ರಧಾನಿ ಮೋದಿ

ಬೆಳಗಾವಿ : ವಿವಿಧ ಅಭಿವೃದ್ಧಿ ಯೋಜನೆಗೆ ಚಾಲನೆ ನೀಡಲು ಸೋಮವಾರ ಕುಂದಾನಗರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ ಹಿನ್ನಲೆಯಲ್ಲಿ ಭರ್ಜರಿ ತಯಾರಿ ನಡೆದಿದೆ. ನಗರದ ಎಲ್ಲೆಡೆ ಬಿಜೆಪಿ ಧ್ವಜ ಹಾರಾಡುತ್ತಿದ್ದು ಸಂಪೂರ್ಣ ಬೆಳಗಾವಿ ಕೇಸರಿಮಯವಾಗಿ ಮಾರ್ಪಟ್ಟಿದೆ.

ಕಿಸಾನ್ ಸಮ್ಮಾನ್ ಯೋಜನೆಯ 13ನೇ ಕಂತಿನ ಹಣವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಪ್ರಧಾನಿ ನರೇಂದ್ರ ಮೋದಿ ವರ್ಗಾವಣೆ ಮಾಡಲಿದ್ದಾರೆ.

ದೇಶದ ಒಟ್ಟು 8 ಕೋಟಿ ರೈತರ ಖಾತೆಗೆ ತಲಾ 2 ಸಾವಿರದಂತೆ 16 ಸಾವಿರ ಕೋಟಿ ರೂಪಾಯಿ. ಇದರಲ್ಲಿ ಕರ್ನಾಟಕ ರಾಜ್ಯದ 49.55 ರೈತರಿಗೆ 991 ಕೋಟಿ ರೂಪಾಯಿ ಮತ್ತು ಬೆಳಗಾವಿ ಜಿಲ್ಲೆಯ 5.10 ಲಕ್ಷ ರೈತರ ಖಾತೆಗೆ 102 ಕೋಟಿ ರೂಪಾಯಿಗಳನ್ನು ವರ್ಗಾಯಿಸಲಿದ್ದು ರೈತರಿಗೆ ಪ್ರಧಾನಿ ನರೇಂದ್ರ ಮೋದಿ ಬೆಳಗಾವಿ ಮೂಲಕ ಭರ್ಜರಿ ಉಡುಗೊರೆ ನೀಡಲಿದ್ದಾರೆ.

ಇದೇ ಕಾರ್ಯಕ್ರಮದಲ್ಲಿ. ಜಲ ಜೀವನ ಮಿಷನ್ ಯೋಜನೆಯಡಿ ಬೆಳಗಾವಿ ಜಿಲ್ಲೆಗೆ ಸಂಬಂಧಿಸಿದಂತೆ ಒಟ್ಟು 1120 ಕೋಟಿ ರೂಪಾಯಿ ವೆಚ್ಚದ  ವಿವಿಧ ತಾಲ್ಲೂಕುಗಳ ಐದು ಬಹುಗ್ರಾಮ ಕುಡಿಯುವ ನೀರು ಯೋಜನೆಗಳ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಲೋಂಡಾ, ಬೆಳಗಾವಿ, ಘಟಪ್ರಭಾ ಡಬ್ಲಿಂಗ್‌ ರೈಲು ಮಾರ್ಗ ಉದ್ಘಾಟನೆ ನಡೆಯಲಿದೆ.‌ ನವೀಕರಣಗೊಂಡ ಬೆಳಗಾವಿ ರೈಲು ನಿಲ್ದಾಣ ಉದ್ಘಾಟನೆಗೊಳ್ಳಲಿದೆ.

Advertisement

Leave a reply

Your email address will not be published. Required fields are marked *

error: Content is protected !!