73 ನೇ ವಸಂತಕ್ಕೆ ಕಾಲಿಡಲಿರುವ ಪ್ರಧಾನಿ ನರೇಂದ್ರ ಮೋದಿ ; ಸಾಗಬೇಕಾದ ದಾರಿ ಸಾಕಷ್ಟಿದೆ…!
ಬೆಂಗಳೂರು : ದೇಶದ ಪ್ರಧಾನಿ ನರೇಂದ್ರ ಮೋದಿಯವರು ( Narendra Modi ) ನಾಳೆ ಭಾನುವಾರ ಸಪ್ಟೆಂಬರ್ 17 ಕ್ಕೆ 73 ನೇ ವಸಂತಕ್ಕೆ ಕಾಲಿಡಲಿದ್ದಾರೆ. ಈ ಹಿನ್ನಲೆಯಲ್ಲಿ ಭಾರತೀಯ ಜನತಾ ಪರ್ಟಿ ( BJP ) ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿದೆ.
ಪ್ರಧಾನಿ ಹುಟ್ಟು ಹಬ್ಬದ ಹಿನ್ನಲೆಯಲ್ಲಿ ಬಿಜೆಪಿ ದೇಶಾದ್ಯಂತ ಸೇವಾ ಹಿ ಸಂಘಟನ್ ಕಾರ್ಯಕ್ರಮ ಆಯೋಜಿಸಿದೆ. ಹದಿನಾರು ದಿನ ನಡೆಯಲಿರುವ ಈ ಕಾರ್ಯಕ್ರಮ ಅಕ್ಟೊಬರ್ 2 ಗಾಂಧಿ ಜಯಂತಿಯಂದು ಕೊನೆಗೊಳ್ಳಲಿದೆ.
2014 ರಲ್ಲಿ ದೇಶದ ಚುಕ್ಕಾಣಿ ಹಿಡಿದ ಪ್ರಧಾನಿ ನರೇಂದ್ರ ಮೋದಿ ಯಶಸ್ವಿಯಾಗಿ ಎರಡನೇ ಅವಧಿ ಮುಕ್ತಾಯ ಮಾಡಿದ್ದು ಮುಂಬರುವ 2024 ರಲ್ಲಿ ಮೂರನೇ ಬಾರಿಗೆ ಪ್ರಧಾನಿ ಹುದ್ದೆ ಅಲಂಕರಿಸಲು ಹೋರಾಟ ನಡೆಸಲಿದ್ದಾರೆ. ಹೊಸ ಬರವಸೆ ಹೊತ್ತುಕೊಂಡು ದೇಶದ ಚುಕ್ಕಾಣಿ ಹಿಡಿದ ಮೋದಿ ಹಲವಾರು ಮಹತ್ವದ ಕೆಲಸವನ್ನೂ ಮಾಡಿದ್ದಾರೆ.
ಪ್ರಮುಖವಾಗಿ ಪ್ರಧಾನಿ ನರೇಂದ್ರ ಮೋದಿ ಅಧಿಕಾರ ವಹಿಸಿಕೊಂಡ ನಂತರದಲ್ಲಿ ದೇಶದಲ್ಲಿ ಹಲವಾರು ಮಹತ್ವದ ನಿರ್ಧಾರವಾಗಿವೆ. ಅವುಗಳಲ್ಲಿ ಬಹು ಮುಖ್ಯವಾಗಿ ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ಆರ್ಟಿಕಲ್ 370 ಯನ್ನು ರದ್ದು ಮಾಡಿದ್ದು. ನೋಟು ರದ್ದತಿ ಸೇರಿದಂತೆ ಹಲವಾರು ಮಹತ್ವದ ಕೆಲಸಗಳು ಆಗಿವೆ.
ಆದರೆ ಬೆಲೆ ಏರಿಕೆ ವಿಷಯವಲ್ಲಿ ಪ್ರಧಾನಿ ನರೇಂದ್ರ ಮೋದಿ ಮೇಲೆ ದೇಶದ ಜನ ಕೊಂಚ ಸಿಟ್ಟು ಹೊಂದಿದ್ದಾರೆ. ಇವೆಲ್ಲವನ್ನೂ ಹೊರತುಪಡಿಸಿ ಭ್ರಷ್ಟಾಚಾರ ವಿಚಾರದಲ್ಲಿ ಕೇಂದ್ರ ಸರ್ಕಾರಕ್ಕೆ ಜನ ಬೆಂಬಲ ಸೂಚಿಸಿದ್ದಾರೆ.