ನಾಳೆ ಕೋಳಿಗುಡ್ಡಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮನ ; ಇಲ್ಲಿದೆ ನೋಡಿ ಕಾರ್ಯಕ್ರಮದ ಸಂಪೂರ್ಣ ಮಾಹಿತಿ
ಕುಡಚಿ : ಸಧ್ಯ ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದ್ದು ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರಕ್ಕೆ ಬೆಳಗಾವಿ ಜಿಲ್ಲೆಗೆ ಆಗಮಿಸಲಿದ್ದು ಭರ್ಜರಿ ತಯಾರಿ ನಡೆಯುತ್ತಿದೆ.
ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳನ್ನು ಕೇಂದ್ರವಾಗಿಟ್ಟುಕೊಂಡು ಜಿಲ್ಲೆಯ ಕುಡಚಿ ವಿಧಾನಸಭಾ ಮತಕ್ಷೇತ್ರದ ಮುಗಳಖೋಡ ಗ್ರಾಮದ ಹೊರವಲಯದಲ್ಲಿ ಶನಿವಾರ ನಡೆಯಲಿರುವ ಬಿಜೆಪಿ ಪ್ರಚಾರ ಸಮಾವೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ.

ಕುಡಚಿ ಮತಕ್ಷೇತ್ರದ ಕೋಳಿಗುಡ್ಡ ಗ್ರಾಮದ ಹೊರವಲಯದ ಅಥಣಿ – ಗೋಕಾಕ್ ರಾಜ್ಯ ಹೆದ್ದಾರಿ ಪಕ್ಕದಲ್ಲಿ ಸುಮಾರು 150 ಎಕರೆ ಪ್ರದೇಶದಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದೆ. ಮೋದಿ ಭೇಟಿ ಹಿನ್ನಲೆಯಲ್ಲಿ ರಾಯಬಾಗ, ಹಾರೂಗೇರಿ ಪಟ್ಟಣಗಳು ಕೇಸರಿಮಯವಾಗಿದ್ದು ಪ್ರಧಾನಿ ಸ್ವಾಗತಕ್ಕೆ ಸಜ್ಜಾಗಿವೆ. ಇನ್ನೂ ಸುಮಾರು 2000 ಕ್ಕೂ ಅಧಿಕ ಪೊಲೀಸರನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದ್ದು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಶನಿವಾರ ಮಧ್ಯಾಹ್ನ 2:30 ಕ್ಕೆ ವಿಶೇಷ ಹೆಲಿಕಾಪ್ಟರ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದು ಸಾರ್ವಜನಿಕರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಇನ್ನೂ ಪ್ರಧಾನಿ ಕಾರ್ಯಕ್ರಮಕ್ಕೆ ಬೆಳಗಾವಿ ಜಿಲ್ಲೆಯ ಅಥಣಿ, ಕಾಗವಾಡ, ಕುಡಚಿ, ರಾಯಬಾಗ, ನಿಪ್ಪಾಣಿ ಹಾಗೂ ಬಾಗಲಕೋಟೆಯ ತೇರದಾಳ ಮತ್ತು ಜಮಖಂಡಿ ತಾಲೂಕಿನ ಲಕ್ಷಾಂತರ ಅಭಿಮಾನಿಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ.
ದೇಶದ ಹೆಮ್ಮೆಯ ಪ್ರಧಾನಿ ನಮ್ಮ ತಾಲೂಕಿಗೆ ಬರುತ್ತಿರುವುದು ಹೆಮ್ಮೆಯ ಸಂಗತಿ. ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಯ ಹಲವು ತಾಲೂಕಿನಿಂದ ಲಕ್ಷಾಂತರ ಜನ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದು ಎಲ್ಲಾ ರೀತಿಯ ಸೌಲಭ್ಯ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಕಣ್ತುಂಬಿಕ್ಕೊಳ್ಳಲು ಜಿಲ್ಲೆಯ ಉತ್ಸುಕರಾಗಿದ್ದು ಇಂದಿನ ಕಾರ್ಯಕ್ರಮ ಮತ್ತೊಂದು ಇತಿಹಾಸ ರೂಪಿಸುವುವು ಸ್ಪಷ್ಟ.
ಪಿ. ರಾಜೀವ್ – ಕುಡಚಿ ಬಿಜೆಪಿ ಶಾಸಕ
ಪ್ರಧಾನಿ ನರೇಂದ್ರ ಮೋದಿ ನಮ್ಮ ಜಿಲ್ಲೆಗೆ ಬರುತ್ತಿರುವುದು ಸಂತೋಷದ ಕ್ಷಣ. ತಮ್ಮ ಉತ್ತಮ ಆಡಳಿತದಿಂದ ಜಗತ್ತಿನ ಗಮನ ಸೆಳೆದಿರುವ ಹೆಮ್ಮೆಯ ಪ್ರಧಾನಿಗೆ ಪ್ರೀತಿಯ ಸ್ವಾಗತ.
ಮಹೇಶ್ ಕುಮಠಳ್ಳಿ – ಅಥಣಿ ಬಿಜೆಪಿ ಶಾಸಕ


