Select Page

Advertisement

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ಖಾಸಗಿ ಪೋಟೋ ವೈರಲ್ – ಏನು ಉತ್ತರ ಕೊಟ್ಟರು ಗೊತ್ತಾ?

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ಖಾಸಗಿ ಪೋಟೋ ವೈರಲ್ – ಏನು ಉತ್ತರ ಕೊಟ್ಟರು ಗೊತ್ತಾ?

ಚಿಕ್ಕಮಗಳೂರು : ಮೂಡಗೆರೆ  ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದು, ಸಧ್ಯ ಅವರ ರಾಜಕೀಯ ಎದುರಾಳಿಗಳು ಖಾಸಗಿ ಪೋಟೋ ಹರಿಬಿಡುತ್ತಿದ್ದು ಶಾಸಕಿ ಖಡಕ್ ಉತ್ತರ ಕೊಟ್ಟಿದ್ದಾರೆ.

ವೀಡಿಯೊ ಸಂದೇಶ ಒಂದನ್ನು ತಮ್ಮ ಸಾಮಾಜಿಕ‌ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಇವರು ಎದುರಾಳಿಗಳಿತೆ ತಕ್ಕ ಉತ್ತರವನ್ನೇ ಕೊಟ್ಟಿದ್ದಾರೆ. ನಯನಾ ಅವರು ಮಾಜಿ ಸಚಿವೆ ಮೋಟಮ್ಮ ಅವರ ಪುತ್ರಿ.

ತನ್ನ ಖಾಸಗಿ ಜೀವನದ ಫೋಟೋಗಳನ್ನು ಜಾಲತಾಣದಲ್ಲಿ ಹರಿಬಿಡುವ ಮೂಲಕ ನನ್ನ ಮೇಲೆ ಸೈಬರ್ ದಾಳಿ ನಡೆಸಲಾಗುತ್ತಿದೆ ಎಂದು ಆರೋಪ ಮಾಡಿರುವ ನಯನಾ, ಈ ವಿಚಾರದಲ್ಲಿ ತಮ್ಮ ದೃಢ ನಿಲುವು ವ್ಯಕ್ತಪಡಿಸಿದ್ದಾರೆ.

ಚುನಾವಣೆಯಲ್ಲಿ ನನ್ನ ವಿರುದ್ಧ ಸೋತವರು ಭ್ರಮನಿರಸನಗೊಂಡು ಸೈಬರ್ ದಾಳಿ ಮಾಡಿಸುತ್ತಿದ್ದಾರೆ ಎಂದು ನಯನಾ ಪ್ರತಿಕ್ರಿಯಿಸಿದ್ದಾರೆ. ಇಂತ ದುಷ್ಕೃತ್ಯಗಳಿಂದ ನನ್ನನ್ನು ಮಾನಸಿಕವಾಗಿ ಕುಗ್ಗಿಸಲು ಸಾಧ್ಯವಿಲ್ಲ ಎಂದಿರುವ ನಯನಾ, ಈ ಮೂರ್ಖರಿಗೆ ರಾಜಕೀಯ ಜೀವನ ಮತ್ತು ಖಾಸಗಿ ಜೀವನದ ನಡುವಿನ ವ್ಯತ್ಯಾಸ ತಿಳಿದಿಲ್ಲ ಎಂದು ವಿರೋಧಿಗಳಿಗೆ ತಿರುಗೇಟು ನೀಡಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!